Crime News: ಲಿಫ್ಟ್ ಗೆ ಸಿಲುಕಿ ಯುವಕ ಸಾವು!
ಬೆಂಗಳೂರು : ಲಿಫ್ಟ್‌ಗೆ (Lift) ಸಿಲುಕಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಕೆಲಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಉತ್ತರಪ್ರದೇಶ (UP) ಮೂಲದ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌ನಲ್ಲಿ (Automobile) ಕೆಲಸ ಮಾಡುತ್ತಿದ್ದ ವಿಕಾಸ್ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.