ರೈಲುಗಳ ಮಧ್ಯೆ ಭೀಕರ ಅಪಘಾತ; ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ!
ಭುವನೇಶ್ವರ : ಒಡಿಶಾದಲ್ಲಿ (Odisha Train Tragedy) ನಿನ್ನೆ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಇಲ್ಲಿಯವರೆಗೆ ಈ ದುರಂತಕ್ಕೆ 250ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, 900ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತ್ತು. ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ […]