ಶಂಕಿತ ಉಗ್ರರ ಟಾರ್ಗೆಟ್ ಕೇವಲ ಬೆಂಗಳೂರು ಅಷ್ಟೇ ಅಲ್ಲ; ಮತ್ತೇನು?
ಬೆಂಗಳೂರು : ಶಂಕಿತ ಉಗ್ರರ (Suspected Terrorist Arrest in Bengaluru) ಪಾತಕಿ ಕೃತ್ಯಗಳ ಭಯಾನಕ ಪ್ಲಾನ್‍ಗಳು ಬಗೆದಷ್ಟೂ ಹೊರಗೆ ಬರುತ್ತಿವೆ. ಶಂಕಿತರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ರಾಜ್ಯದಲ್ಲಿಯೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಕೇಂದ್ರ ಅಪರಾಧ ವಿಭಾಗದ ಪೊಲೀಸರು (CCB Police) ತನಿಖೆ ನಡೆಸಿದ ಸಂದರ್ಭದಲ್ಲಿ ಹೊರ ಬಂದಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, […]