Kornersite

Just In Karnataka State

Rain Update: ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಭರ್ಜರಿ ಮಳೆ!

Bangalore : ರಾಜ್ಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು (Bangalore rain) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಬಿರುಗಾಳಿ ಜೊತೆ ಸಾಧಾರಣ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು […]

Bengaluru Crime Just In Karnataka State

Crime News: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವ ಮಸಣಕ್ಕೆ!

Bangalore: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯ ಲಗ್ಗೆರೆ ಹತ್ತಿರದ ಚೌಡೇಶ್ವರಿ ನಗರದ ಹಳ್ಳಿರುಚಿ ಹೋಟೆಲ್ ಹತ್ತಿರ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ (Congress Worker Murder) ರವಿ ಅಲಿಯಾಸ್ ಮತ್ತಿರವಿ(42) ಕೊಲೆಯಾದ ಯುವಕ. ಬೈಕ್ ಗಳಲ್ಲಿ ಬಂದ ಐದಾರು ಜನ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. CMH ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಆರ್ಭಟ; ಯಾವ ಯಾವ ಜಿಲ್ಲೆಯಲ್ಲಿ ಆಗಲಿದೆ ಮಳೆ!

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವು (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆ ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ನಿನ್ನೆ ಕೂಡ ಭರ್ಜರಿ ಮಳೆಯಾಗಿದೆ. ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. […]

Bengaluru Just In Karnataka State

ಚಿನ್ನಾಭರಣದ ಮಳಿಗೆಗೆ ನುಗ್ಗಿದ ನೀರು; ನೀರಲ್ಲಿ ಲೀನವಾದ ಚಿನ್ನಾಭರಣ!

ಬೆಂಗಳೂರಿನಲ್ಲಿ ನಿನ್ನೆ ಭರ್ಜರಿ ಮಳೆ ಸುರಿದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಾಕಷ್ಟು ಅವಾಂತರಗಳು ನಡೆದಿವೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಸಾಕಷ್ಟು ಹಾನಿ ಸಂಭವಿಸುವಂತಾಗಿದೆ. ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದ್ದು, ಮಳೆಯ ನೀರು ಅಂಗಡಿಗೆ ನುಗ್ಗಿ ಸುಮಾರು ಎರಡುವರೆ ಕೋಟಿ ರೂ. ನಷ್ಟವಾಗಿದೆ. ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ […]

Bengaluru Just In Karnataka Sports

ಟೂರ್ನಿಯಿಂದ ಹೊರ ನಡೆದ ಬೆಂಗಳೂರು; ಮೈದಾನದಲ್ಲಿಯೇ ಭಾವುಕಾರದ ಆಟಗಾರರು!

ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿಯೂ ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸದೆ ಟೂರ್ನಿಯಿಂದ ಹೊರಬಿದ್ದಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡುಪ್ಲೆಸಿಸ್ (RCB vs GT) ಪಡೆ ಬೌಲಿಂಗ್ನಲ್ಲಿ ಕಳಪೆ ಪ್ರದರ್ಶನ ತೋರಿ, ಸೋಲು ಕಂಡಿತು. ಆರ್ಸಿಬಿ ಸೋಲುತ್ತಿದ್ದಂತೆ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಆಟಗಾರರು ಕೂಡ ಬೇಸರಗೊಂಡರು. ಆರ್ಸಿಬಿ ಪ್ಲೇಯರ್ಸ್ ಮೈದಾನದಲ್ಲೇ ತಮ್ಮ ಭಾವನೆ ವ್ಯಕ್ತಪಡಿಸಿ ಭಾವುಕರಾದರು. […]

Bengaluru Just In Karnataka Politics State

CM Siddaramaiah: ಸಭೆ- ಸಮಾರಂಭಗಳಲ್ಲಿ ಹಾರ- ತುರಾಯಿ ಬಳಸದಂತೆ ಸೂಚನೆ!

ಬೆಂಗಳೂರು : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಾನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ (Public Programme) ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಿ. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಬಸವರಾಜ […]

Bengaluru Just In Karnataka Politics State

“ನನಗೆ ಜೀರೋ ಟ್ರಾಫಿಕ್‌ ಬೇಡ”-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ನಿರ್ಧಾರ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಈ ನಿರ್ಧಾರದಿಂದ ನನಗೆ ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಹೋಗುವ ಮಾರ್ಗದಲ್ಲಿ ಸುಮಾರು 20 ನಿಮಿಷ ವಾಹನ ಸವಾರರಿಗೆ ಸಂತೋಷವಾಗಿದೆ. ಸಾರ್ವಜನಿಕರಿಗೆ ಇದೊಂದು ಬಂಪರ್ ಸುದ್ದಿ ಎಂದರೆ ತಪ್ಪಾಗಲಾರದು. ಬೆಂಗಳೂರಲ್ಲಿ ಮಳೆ ಬಂದ ಹಿನ್ನೆಲೆ ಸಿಟಿ ರೌಂಡ್ಸ್ ಹೋಗಿದ್ದರು ಸಿಎಂ. ಈ ವೇಳೆ ಎಲ್ಲೆಡೆ ಟ್ರಾಫಿಕ್ ಸಿಕ್ಕಾಪಟ್ಟೆಯಾಗಿತ್ತು. ಈ ಟ್ರಾಫಿಕ್ ಬಿಸಿ ಸಿಎಂ […]

Bengaluru Just In Karnataka State

Rain Effect: ಬೆಂಗಳೂರಲ್ಲಿ ಸುರಿದ ಮಹಾ ಮಳೆಗೆ ಯುವತಿ ಬಲಿ!!

ಬೆಂಗಳೂರಲ್ಲಿ ಸುರಿದ ಮಹಾ ಮಳೆಗೆ ಯುವತಿ ಸಾವನ್ನಪ್ಪಿದ್ದಾಳೆ. 22 ವರ್ಷದ ಭಾನುರೇಖಾ ಸಾವನ್ನಪ್ಪಿದ ಯುವತಿ. ವಿಧಾನಸೌಧದಿಂದ 200 ಮೀಟರ್ ದೂರದಲ್ಲಿ ಇರುವ ಕೆ. ಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಸಿಲುಕೊಂಡಿತ್ತು. ಅಂಡರ್ ಪಾಸ್ ಪೂರ್ತಿ ಮಳೆ ನೀರು ನಿಂತು ಭರ್ತಿಯಾಗಿದೆ. ಕಾರು ಸಿಲುಕಿದ ಪರಿಣಾಮ ಭಾನು ರೇಖಾಳನ್ನ ಕೂಡಲೇ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಲಿಲ್ಲ. ಕೂಡಲೇ ಸಿಎಂ ಸಿದ್ದರಾಮಯ್ಯ್ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಭಾನುರೇಖಾ ಬೆಂಗಳೂರಿನ […]

Bengaluru Just In Karnataka State

Rain Update: ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯೇ?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರನಲ್ಲಿ ಮೋಡ ಕವಿದ ವಾತವರಣ ಇದ್ದು, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಒಣಹವೆ ಕಂಡು ಬಂದರೆ,ನಂತರ ಎರಡು ದಿನಗಳ ಕಾಲ […]

Bengaluru Crime Just In Karnataka State

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ: ಇದೆಲ್ಲ ಮಾಡಿದ್ದು ಪತ್ನಿ ಶೋಕಿಗಾಗಿ

ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಮೃತರನ್ನ ಬಿಟಿಎಂ ಬಡಾವಣೆಯ ನಿವಾಸಿ 35 ವರ್ಷದ ಹರೀಶ್, ಮಕ್ಕಳು ಆರು ವರ್ಷದ ಪ್ರಜ್ವಲ್ ಹಾಗೂ ನಾಲ್ಕು ವರ್ಷದ ರಿಷಬ್ ಎಂದು ಗುರುತಿಸಲಾಗಿದೆ. ಮೇ 10 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೊದಲು ಮಕ್ಕಳನ್ನ ನೇಣು ಹಾಕಿ ಕೊಂದು ನಂತರ ಅದೇ ಹಗ್ಗಕ್ಕೆ ತಾನೂ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಸಾಯೋದಕ್ಕು ಮುನ್ನ ಮೃತ ಹರೀಶ್ ತನ್ನ […]