ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ; ಸಿಎಂ ಅಭಿನಂದನೆ!
ಬೆಂಗಳೂರು : ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಅಲ್ಲದೇ, ಯು.ಟಿ.ಖಾದರ್ ಅವರಿಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ […]