40 ಅಡಿ ಕೊಳವೆ ಬಾವಿಗೆ ಬಿದ್ದ 3 ವರ್ಷದ ಮಗು
3 ವರ್ಷದ ಮಗುವೊಂದು 40 ಅಡಿ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಬಿಹಾರದ ನಳಂದದಲ್ಲಿ ನಡೆದಿದೆ. ಈಗಾಗಲೇ ರಕ್ಷಣಾ ಕಾರ್ಯ ಮುಂದುವರೆದಿದೆ. ಶಿಎಂ ಎಂಬ ಬಾಲಕ ಕೊಳವೆ ಬಾವಿಗೆ ಬಿದ್ದವನು. ಶಿವಂನನ್ನು ರಕ್ಷಿಸಲು ಎನ್ ಡಿಆರ್ ಎಫ್ ಮತ್ತು ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ಬಂದ ಕಾರ್ಯಾಚರಣೆ ನಡೆಸಿವೆ. ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಸಿಬ್ಬಂಧಿಗಳಿಗೆ ಶಿವಂನ ಧ್ವನಿ ಕೇಳುತ್ತಿದೆ. ಶಿವಂನ ತಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿಯೇ ಆಟವಾಡುತ್ತಿದ್ದ ಮಗನ ಕಾಲು ಜಾರಿ ಕೊಳವೆ ಬಾವಿಗೆ ಬಿದ್ದಿದ್ದಾನೆ. […]