Crime News: ಜನನಿಬಿಡ ಪ್ರದೇಶದಲ್ಲಿಯೇ ಬಿಜೆಪಿ ಮುಖಂಡನ ಹತ್ಯೆ!
ನಡು ರಸ್ತೆಯಲ್ಲಿಯೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು. ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್ ಹತ್ತಿರ ಕಾರು ಬಂದಾಗ ಏಕಾಏಕಿ ಶಂಕರ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು […]