ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 25 ಜನರಿಗೆ ಗಾಯ, ಚಾಲಕ ಸಾವು
ಕಾರವಾರದ ಯಲ್ಲಾಪುರದ ಬಳಿ ಖಾಸಗಿ ಬಸ್ ವೊಂದು ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದಾನೆ ಹಾಗೂ 25 ಜನ ಪ್ರಯಾಣಿಕರಿಗೆ ಗಾಯಗಳಾಗಿದೆ. ಅಸಲಿಗೆ ಬೆಂಗಳೂರಿನಿಂದ ಗೋವಾಗೆ ಖಾಸಗಿ ಬಸ್ ವೊಂದು ತೆರಳುತ್ತಿತ್ತು. ರಾಷ್ತ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೊಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 25 ಜನ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಈ ಅಪಘಾತದಲ್ಲಿ ಬಸ್ ಚಾಲಕ […]