Kornersite

Crime Just In National

Neet Exam: ವಿದ್ಯಾರ್ಥಿನಿಯರ ಒಳ ಉಡುಪು ತೆಗೆಯಲು ಸೂಚನೆ!

Chennai: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ (NEET Exam) ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಒಳಉಡುಪು ಕಳಚಿಸಿರುವ ವಿಚಾರವೊಂದು ಬೆಳಕಿಗೆ ಬಂದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚೆನ್ನೈನ ಮೈಲಾಪುರದಲ್ಲಿ ನೀಟ್ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಹಾಲ್ ಗೆ ಪ್ರವೇಶಿಸುವ ಮೊದಲು ಅವಳ ಒಳ ಉಡುಪುಗಳನ್ನು ತೆಗೆಯುವಂತೆ ಹೇಳಲಾಗಿದ್ದು, ಸದ್ಯ ಸಾರ್ವಜನಿಕರರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯಕೀಯ ಅಧ್ಯಯನ ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ನಡೆಯುವ ಪ್ರವೇಶ ಪರೀಕ್ಷೆ ಇದಾಗಿದ್ದು, ರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆಯಲು ವಿದ್ಯಾರ್ಥಿಗಳು ತಿಂಗಳುಗಳಿಂದಲೇ ತಯಾರಿ […]

Crime National

Breaking News: ಮದುವೆ ಮನೆಯಲ್ಲಿ ಸೂತಕ; ರಸಮ್ ಕಡಾಯಿ ಒಳಗೆ ಬಿದ್ದು ಯುವಕ ಸಾವು!

ಚೆನ್ನೈ: ಕಾಲೇಜಿನಲ್ಲಿ ಓದುತ್ತ ಅರೆಕಾಲಿಕ ಅಡುಗೆ ಭಟ್ಟನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ರಸಮ್ ಪಾತ್ರೆಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮದುವೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಚೈನ್ನೈ ಹತ್ತಿರದ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಾವನ್ನಪ್ಪಿದ ಯುವಕ ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದ ಎನ್ನಲಾಗಿದೆ.ಈ ಯುವಕ ಅಡುಗೆ ಕೆಲಸಕ್ಕೆಂದು ಅರೆಕಾಲಿಕ ಕೆಲಸಗಾರನಾಗಿದ್ದ. ಮದುವೆ ಸಮಾರಂಭದಲ್ಲಿ ಊಟ ಬಡಿಸುತ್ತಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ರಸಂ […]

Just In Sports

IPL 2023: ಟಿ20 ಲೀಗ್ ನ ಕ್ವಾಲಿಫೈಯರ್ ಪಂದ್ಯಗಳ ದಿನಾಂಕ ಫಿಕ್ಸ್!

ಬಿಸಿಸಿಐ ಶುಕ್ರವಾರ ಟಿ20 ಲೀಗ್ ನ ಕ್ವಾಲಿಫೈಯರ್ ಪಂದ್ಯಗಳ ವೇಳಾ ಪಟ್ಟಿ ಪ್ರಕಟಿಸಿದ್ದು, ಚೆನ್ನೈ ಹಾಗೂ ಅಹಮದಾಬಾದ್‌ ನಲ್ಲಿ ನಡೆಯಲಿವೆ. ಮೇ 23ರಂದು ಮೊದಲ ಕ್ವಾಲಿಫೈಯರ್‌, ಮೇ 24ರಂದು ಎಲಿಮಿನೇಟರ್‌ ಪಂದ್ಯಗಳು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್‌, ಮೇ 28ರಂದು ಫೈನಲ್‌ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮೇ 21ರಂದು ಲೀಗ್‌ ಹಂತ ಮುಕ್ತಾಯಗೊಳ್ಳಲಿದೆ. ಕಳೆದ ವರ್ಷವೂ 2ನೇ ಕ್ವಾಲಿಫೈಯರ್‌ ಹಾಗೂ ಫೈನಲ್‌ ಪಂದ್ಯಗಳು ಅಹಮದಾಬಾದ್‌ ನಲ್ಲಿಯೇ […]

Just In Sports

IPL 2023: ಗೆಲುವಿನ ಅಭಿಯಾನ ಮುಂದುವರೆಸಿದ ಚೆನ್ನೈ; ಹೈದರಾಬಾದ್ ಗೆ ಮತ್ತೆ ಸೋಲು!

Chennai: ಕೂಲ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಗೆಲುವಿನ ಅಭಿಯಾನ ಮುಂದುವರೆಸಿದೆ. ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದುವಿನಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಚೆನ್ನೈ; ಹೋರಾಡಿ ಸೋತ ಬೆಂಗಳೂರು!

IPL 2023 : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ಪಂದ್ಯವನ್ನು ಹೋರಾಡಿ ಸೋತಿದೆ. 227 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ಆರಂಭದಲ್ಲಿಯೇ ವಿಕೆಟ್‌ ಕಳೆದುಕೊಂಡರೂ ಮ್ಯಾಕ್ಸ್‌ ವೆಲ್‌ (Maxwell) ಮತ್ತು ಡುಪ್ಲೆಸಿಸ್‌ (F du Plessis) ಆಟದಿಂದಾಗಿ ಜಯದತ್ತ ಬಂದಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಕಳೆದುಕೊಂಡ ಪರಿಣಾಮ ಅಂತಿಮವಾಗಿ 20 ಓವರ್‌ ಗಳಲ್ಲಿ 8 […]