ಮೊಮ್ಮಗ ಪಿಯುಸಿ ಪಾಸ್ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ!
Bangalore : ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೊಮ್ಮಗ ದಿ. ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ (Dhavan Rakesh) 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಅವರಿಂದಲೇ ಪ್ರಮಾಣಪತ್ರವನ್ನು ಮೊಮ್ಮಗ ಪಡೆದಿದ್ದಾನೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಬೆಂಗಳೂರಿನ ಕೆನಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದ ಭಾಗವಾಗಿದ್ದು, ನನಗೆ ತುಂಬಾ ಸಂತೋಷವಾಯಿತು. […]
