ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನಿಂದ ನೋಟಿಸ್ ಜಾರಿ!
ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷ ಮತದಾರರಿಗೆ ಆಮಿಷ ಒಡ್ದಿದ್ದರು. ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿ ಆಮಿಷ ಒಡ್ಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ. ಶಂಕರ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.