Crime News: ಮನೆ ಕುಸಿತ; ವೃದ್ಧೆ, 20 ದಿನಗಳ ಹಸುಗೂಸು ಸಾವು!
Koppal : ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ (Kanakagiri) ತಾಲೂಕಿನ ಜೀರಾಳದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸೇರಿದಂತೆ 20 ದಿನಗಳ ಹಸುಗೂಸು ಸಾವನ್ನಪ್ಪಿದ್ದಾರೆ. ಫಕೀರಮ್ಮ(60), 20 ದಿನದ ಹೆಣ್ಣು ಮಗು ಸಾವನ್ನಪ್ಪಿದ ದುರ್ದೈವಿಗಳು. ಘಟನೆಯಲ್ಲಿ ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ಘಟನೆಯಲ್ಲಿ ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ದಿನಗಳ […]