Kornersite

Bengaluru Just In Karnataka Politics State

ಅಧಿಕೃತವಾಗಿ ಸಿಎಂ, ಡಿಸಿಎಂ ಘೋಷಣೆ ಮಾಡಿದ ಎಐಸಿಸಿ; ಷರತ್ತು ಇವೆಯಾ?

NewDelhi : ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ (AICC) ಅಧಿಕೃತವಾಗಿ ಹೇಳಿದೆ. ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸುರ್ಜೇವಾಲಾ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದೇ ಡಿಸಿಎಂ ಹುದ್ದೆ ಸರ್ಕಾರದಲ್ಲಿ ಇರಲಿದೆ. ಮುಂದಿನ ಲೋಕಸಭಾ ಚುನಾವಣೆ ನಡೆಯುವರೆಗೂ ಡಿಕೆ ಶಿವಕುಮಾರ್‌ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಈ […]

Bengaluru Just In Karnataka Politics State

CM Candidate: 2ನೇ ಬಾರಿಗೆ ಸಿಎಂ ಆಗಿ ಶನಿವಾರ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ?

Bangalore : ಕಾಂಗ್ರೆಸ್ ನಲ್ಲಿ ಕೊನೆಗೂ ಸಿಎಂ (CM) ಕುರ್ಚಿಗಾಗಿ ನಡೆದ ಫೈಟ್ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿ.ಕೆ. ಶಿವಕುಮಾರ್ (DK Shivakumar) ಡಿಸಿಎಂ (DCM) ಆಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದಲ್ಲಿಯೂ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ಗಳು […]

Bengaluru Just In Karnataka Politics State

Karnataka CM: ಸಿದ್ದರಾಮಯ್ಯ ಸಿಎಂ ಆಗಲು ಒಪ್ಪಿದ ಡಿಕೆಶಿ; ಎರಡು ಪ್ರಭಲ ಖಾತೆಗಳೊಂದಿಗೆ ಡಿಸಿಎಂ!

NewDelhi : ರಾಜ್ಯದ ಸಿಎಂ (Karnataka CM) ಗುದ್ದಾಟ ಅಂತ್ಯವಾಗಿದ್ದು, 5ನೇ ದಿನಕ್ಕೆ ಸಿಎಂ ಬಿಕ್ಕಟ್ಟು ಪೂರ್ಣಗೊಂಡಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ (Siddaramaiah) ಸಿಎಂ ಆಗಲು ಡಿ.ಕೆ. ಶಿವಕುಮಾರ್‌ (DK Shivakumar) ಒಪ್ಪಿಗೆ ನೀಡಿದ್ದಾರೆ. ಬುಧವಾರ ಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ತಡರಾತ್ರಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ (Sonia Gandhi) ದೂರವಾಣಿ ಮೂಲಕವೇ ಡಿಕೆಶಿ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಅವಧಿಗೆ ಸಿದ್ದರಾಮಯ್ಯ […]

Bengaluru Just In Karnataka Politics State

CM Post: ಸಿದ್ದು, ಡಿಕೆಶಿ ಗುದ್ದಾಟಕ್ಕೆ ಅಂತ್ಯ ಯಾವಾಗ?

Bangalore : ರಾಜ್ಯದ ಮತದಾರರು ಕಾಂಗ್ರೆಸ್‌ ಗೆ ಪೂರ್ಣ ಬಹುಮತ ನೀಡಿ ಐದು ದಿನಗಳೇ ಕಳೆದಿವೆ. ಆದರೆ, ಇಲ್ಲಿಯವರೆಗೆ ನೂತನ ಸರ್ಕಾರ ಮಾತ್ರ ಅಸ್ತಿತ್ವಕ್ಕೆ ಬರುತ್ತಿಲ್ಲ. ಪಕ್ಷ ಅಧಿಕಾರಕ್ಕೆ ಬರೋವರೆಗೂ ಇದ್ದ ನಾಯಕರಲ್ಲಿದ್ದ ಒಗ್ಗಟ್ಟು, ಈಗ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಕಾಣುತ್ತಲೇ ಇಲ್ಲ. 4 ದಿನ ಕಳೆದರೂ ಸಿಎಂ ಆಯ್ಕೆಗೆ ಕಸರತ್ತು ನಡೆಯುತ್ತಲೇ ಇದೆ. ಪ್ರಭಲ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಲ್ಲಿ ಒಮ್ಮತ ಮೂಡಿಸುವಲ್ಲಿ ಹೈಕಮಾಂಡ್ ನಾಯಕರು ಸಫಲರಾಗಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಸಿಎಂ, […]

Bengaluru Just In Karnataka Politics State

ಸಿದ್ದರಾಮಯ್ಯರ ಮಾಜಿ ಶಿಷ್ಯರ ನಡುವೆ ಫೈಟ್; ಸುಧಾಕರ್ ಆರೋಪಕ್ಕೆ ಎಂಟಿಬಿ ಗರಂ!

Bangalore : ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ. ಇದರ ಮಧ್ಯೆ ಅವರ ಮೇಲೆ ಅವರ ಒಂದು ಕಾಲದ ಶಿಷ್ಯ ಡಾ. ಕೆ.ಸುಧಾಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಅವರ ಈ ಹೇಳಿಕೆಗೆ ಅವರ ಪಕ್ಷದಲ್ಲಿನ ನಾಯಕರಿಂದಲೇ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ (Siddaramaiah) ಪರ ಎಂಟಿಬಿ ನಾಗರಾಜ್ (MTB Nagaraj) ಬ್ಯಾಟಿಂಗ್ ಮಾಡಿದ್ದಾರೆ. ಬಿಜೆಪಿಗೆ ಸಿದ್ದರಾಮಯ್ಯ ಪ್ರೇರಣೆ ಎಂಬ ಡಾ.ಕೆ.ಸುಧಾಕರ್ (K Sudhakar), ಎಸ್.ಟಿ. ಸೋಮಶೇಖರ್ (ST Somashekhar) ಟ್ವೀಟ್ ಹಿನ್ನೆಲೆಯಲ್ಲಿ ಎಂಟಿಬಿ […]

Bengaluru Just In Karnataka Politics State

CM Candidate: ಟಗರು ಸಿಎಂ ಕುರ್ಚಿ ಹತ್ತದಂತೆ ಎದುರು ನಿಂತ ಬಂಡೆ!

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress)135 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಸಿಎಂ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಉಭಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾತೆ. ಈಗ ಸಿದ್ದರಾಮಯ್ಯ ವಿರುದ್ಧ ಡಿ.ಕೆ. ಶಿವಕುಮಾರ್ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ನಾನು ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ, ಅಧಿಕಾರಕ್ಕೆ ತಂದಿದ್ದೇನೆ […]

Bengaluru Just In Karnataka Politics State

Dhawan Rakesh: ತಾತ ಸಿಎಂ ಆದ ಎಂದು ಹಿಗ್ಗಿನಿಂದ ಬಂದ ಮೊಮ್ಮಗ!

Bangalore : ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಅವರ ಮೊಮ್ಮಗ ಹಾಗೂ ರಾಕೇಶ್ ಅವರ ಮಗ ಧವನ್ ರಾಕೇಶ್ (Dhawan Rakesh) ತಾತನ ಮನೆಗೆ ಓಡೋಡಿ ಬಂದಿದ್ದ. ಆದರೆ, ಅದು ಇನ್ನೂ ಸತ್ಯ ಆಗದ ಹಿನ್ನೆಲೆಯಲ್ಲಿ ಮತ್ತೆ ದೇವರಲ್ಲಿ ಪ್ರಾರ್ಥಿಸುವಂತಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂಬ ಮಾತು ಹಬ್ಬಿತ್ತು. ಹೀಗಾಗಿ ರಾಜ್ಯದಲ್ಲಿ ಸಿದ್ದು ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದರು. ಆದರೆ, ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರು […]

Bengaluru Karnataka Politics State

ಕರ್ನಾಟಕದ ಸಿಎಂ ಆಯ್ಕೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ; ಸುಳ್ಳು ಸುದ್ದಿ ಹಬ್ಬಿದೆ?

NewDelhi : ಕರ್ನಾಟಕ ಸಿಎಂ ಹುದ್ದೆ ಆಯ್ಕೆ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅದು ನಡೆಯುತ್ತಿದೆ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಕುರಿತು ಇನ್ನೂ ಚರ್ಚೆ ನಡೆಯುತ್ತಿದೆ. ಈ ಕುರಿತು ಸಂಪೂರ್ಣವಾಗಿ ನಿರ್ಧಾರ ಕೈಗೊಂಡಾಗ ನಾವು ತಿಳಿಸುತ್ತೇವೆ. ಇನ್ನು 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ […]

Bengaluru Just In Karnataka Politics State

ಸಿದ್ದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾರೆಲ್ಲ ಬರುತ್ತಾರೆ?

Bangalore : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲಿಯೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ […]

Bengaluru Just In Karnataka Politics State

ನಾಳೆ 3.30ಕ್ಕೆ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಪ್ರಮಾಣ ವಚನ!

ಬೆಂಗಳೂರು : ಸಿಎಂ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮನೆಯ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ವರುಣಾ (Varuna) […]