ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಕಲಾಪ ಮುಂದೂಡಿಕೆ
ಸಿಎಂ ಸಿದ್ದರಾಮಯ್ಯ ಇಂದು ಸುಮಾರು 3 ಗಂಟೆಗಳ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ ನಲ್ಲಿ ರೈತರು, ಮಹಿಳೆಯರು, ಕೃಷಿ, ಆರೋಗ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ. ಇದು ಸಿದ್ದರಾಮಯ್ಯನವರ 14ನೇ ಬಜೆಟ್ ಆಗಿದೆ. ಬಜೆಟ್ ಮಂಡನೆ ನಂತರ ಅಂಗೀಕಾರ ಮಾಡುವಂತೆ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯನವರಿಗೆ ಸಂಪುಟ ಸದಸ್ಯರು, ಶಾಸಕರೆಲ್ಲರೂ ಅಭಿನಂದನೆ ಸಲ್ಲಿಸಿದರು. ನಂತರ ಕಲಾಪವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರಕ್ಕೆ ಮುಂದೂಡಿದ್ದಾರೆ.