Karnataka Assembly Election: ವರುಣಾ ಕ್ಷೇತ್ರದ ಅಖಾಡದಲ್ಲಿ ಸೋಮಣ್ಣಗೆ ಕ್ಲಾಸ್ ತಗೊಂಡ ಮತದಾರರು!
Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ. ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? […]









