Kornersite

Just In Karnataka

Karnataka Assembly Election: ವರುಣಾ ಕ್ಷೇತ್ರದ ಅಖಾಡದಲ್ಲಿ ಸೋಮಣ್ಣಗೆ ಕ್ಲಾಸ್ ತಗೊಂಡ ಮತದಾರರು!

Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ. ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? […]

Bengaluru Just In Karnataka National State

ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಅನರ್ಹಗೊಳಿಸಿದರು- ರಾಹುಲ್ ಕಿಡಿ!

Bidar : ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಕ್ಕೆ ನನ್ನನ್ನು ಪಾರ್ಲಿಮೆಂಟ್ ನಿಂದ ಅನರ್ಹ ಮಾಡಿದರು. ಮಾತನಾಡಲು ಮೈಕ್ ನೀಡಲಿಲ್ಲ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾಲ್ಕಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ 40% ಕೊಡಬೇಕು. ಇಲ್ಲಾವಾದರೆ ನಿಮ್ಮ ಕೆಲಸಗಳು ಆಗಲ್ಲ. ಮೋದಿ ಸುಳ್ಳು ಹೇಳಿದಂತೆ ನಾವು ಸುಳ್ಳು ಹೇಳಲ್ಲ, ಯಾಕೆಂದರೆ 15 ಲಕ್ಷ ರೂ. ಹಾಕುತ್ತೇನೆ ಎಂದ […]

Bengaluru Just In Karnataka State

Karnataka Assembly Election: ಸಾವಿರ ಕೋಟಿ ರೂ. ಗೂ ಅಧಿಕ ಆಸ್ತಿ ಒಡೆಯ ಡಿಕೆಶಿ!

Bangalore : ಡಿ.ಕೆ. ಶಿವಕುಮಾರ್ ಈಗಾಗಲೇ ಕನಕಪುರ (Kanakapura) ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ಶಿವಕುಮಾರ್‌ (DK Shivakumar) ತಮ್ಮ ಬಳಿ ಒಟ್ಟು 1,214 ಕೋಟಿ ರೂ. ಮೌಲ್ಯದ ಆಸ್ತಿಯಿದೆ (Assets) ಎಂದು ಘೋಷಿಸಿದ್ದಾರೆ. 2018ರಲ್ಲಿ ಡಿಕೆಶಿ 840 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದರು. ಡಿಕೆಶಿ ಪತ್ನಿಯ ಸ್ಥಿರಾಸ್ತಿ ಹಾಗೂ ಚರಾಸ್ತಿ ಒಟ್ಟು ಮೌಲ್ಯ 153.30ಕೋಟಿ ರೂ. ಇದ್ದು ಇದರಲ್ಲಿ ಅವಿಭಜಿತ […]

Just In Karnataka State

Karnataka Assembly Election: ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು!

Gadag : ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ (Anil Menasinakai) ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅನಿಲ್ ಮೆಣಸಿನಕಾಯಿ ಅವರು ಗದಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ (Nomination) ಸಲ್ಲಿಸಿ ಹೊರ ಬರುತ್ತಿದ್ದ ಸಂದರ್ಭದಲ್ಲಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ರೋಡ್ ಶೋ […]

Bengaluru Just In Karnataka State

Karnataka Assembly Election: ಶೆಟ್ಟರ್ ರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ; ಆ ಕ್ಷಣ ಕಂಡ ಕಾರ್ಯಕರ್ತರ ಕಣ್ಣೆಲ್ಲ ತೇವ!

Hubli : ಹಿರಿಯ ನಾಯಕ ಜಗದೀಶ್ ಶೆಟ್ಟರ್ (Jagadish Shettar)ಅವರು ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದು, ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ತಬ್ಬಿ ಕಣ್ಣೀರಿಟ್ಟಿದ್ದಾರೆ. ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ಸಂದರರ್ಭದಲ್ಲಿ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ […]

Bengaluru Just In Karnataka State

Karnataka Assembly Election: ಕಾಂಗ್ರೆಸ್ ಈಗ ಸನ್ಮಾನ ಮಾಡುತ್ತೆ; ಚುನಾವಣೆ ಮುಗಿದ ಮೇಲೆ ಅಪಮಾನ ಮಾಡುತ್ತೆ- ಸಿಎಂ

Bangalore : ಕಾಂಗ್ರೆಸ್‌ (Congress) ಪಕ್ಷವು ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ (BJP) ಹೋದವರಿಗೆ ಸನ್ಮಾನ ಮಾಡುದೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅಪಮಾನ ಮಾಡುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆಗೆ ತಿರುಗೇಟು ನೀಡಿದ ಅವರು, ಪಕ್ಷ ಬಿಟ್ಟು ಹೋದವರು ಏನಾದರೂ ಕಾರಣ ಕೊಡಲೇಬೇಕು. ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನಮಾನಗಳನ್ನು ಕೊಡುವುದರ ಜೊತೆಗೆ ಅವರನ್ನು ಅತ್ಯಂತ ಗೌರವಯುತವಾಗಿ ಬಿಜೆಪಿ […]

Bengaluru Just In Karnataka

Karnataka Assembly Election: 30 ವರ್ಷಗಳಿಂದ ದುಡಿದ ಪಕ್ಷ ಬಿಟ್ಟು, ಕೈ ಹಿಡಿದ ಶೆಟ್ಟರ್!

Bangalore : ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಕೊನೆಗೂ ಇಷ್ಟು ವರ್ಷ ದುಡಿದ ಪಕ್ಷ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ‘ಕೈ’ ಬಾವುಟ ಹಿಡಿದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್‌ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶೆಟ್ಟರ್‌ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. […]

Bengaluru Just In Karnataka State

Karnataka Assembly Election: ಕಾಂಗ್ರೆಸ್ ನ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ!

Karawar : ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು […]

Bengaluru Just In Karnataka State

Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!

Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ […]

Bengaluru Just In Karnataka State

Jagadish Shettar: ಜಗದೀಶ ಶೆಟ್ಟರ್ ಗೆ ಪಕ್ಷ ಏನೂ ಕಡಿಮೆ ಮಾಡಿಲ್ಲ, ಅವರು ದ್ರೋಹ ಮಾಡಿದರು; ಯಡಿಯೂರಪ್ಪ

Bangalore : ಜಗದೀಶ ಶೆಟ್ಟರ್ (Jagadish Shettar) ಜನಸಂಘದಿಂದಲೂ ಬಿಜೆಪಿ(BJP)ಯೊಂದಿಗೆ ಇದ್ದರು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂತಹ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಶೆಟ್ಟರ್ ಅವರನ್ನು ಶಾಸಕ, ಬೆಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಆಗಿ ಮಾಡಲಾಗಿತ್ತು. ಆದರೆ, ವರು ಪಕ್ಷಕ್ಕೆ ದ್ರೋಹ ಮಾಡಿದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಟ್ಟರ್ ರಾಜೀನಾಮೆ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ […]