Kornersite

Bengaluru Karnataka State

ವಿದ್ಯುತ್ ಬಿಲ್ ಕಟ್ಟದಿದ್ದರೆ, ಕನೆಕ್ಷನ್ ಕಟ್; ಗ್ಯಾರಂಟಿ ಅಂತ ಹೇಳುವಂತಿಲ್ಲ!

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 200 ಯೂನಿಟ್‌ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿತ್ತು. ಅದರಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು. ಆದರೆ, ಈ ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ. ಅಷ್ಟರಲ್ಲಿಯೇ ವಿದ್ಯುತ್ ಬಿಲ್ ಪಾವತಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನರ ಮನವೊಲಿಸರು ಬೆಸ್ಕಾಂ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ. ಯೋಜನೆ ಅನುಷ್ಠಾನವಾಗುವವರೆಗೆ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ, ಇಲ್ಲದಿದ್ದರೆ ನಿಯಮದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ. […]

Bengaluru Crime Just In Karnataka State

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಎಡಿಜಿಪಿ ಬಿ.ದಯಾನಂದ್ ನೇಮಕ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಬಿ.ದಯಾನಂದ್ ಅವರನ್ನ ನೇಮಕ ಮಾಡಲಾಗಿದೆ. ಈವರೆಗೆ ಬೆಂಗಳೂರು ಕಮಿಷನರ್ ಆಗಿದ್ದ ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಟ್ರಾಫಿಕ್ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂ ಸಲೀಂ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Bengaluru Just In Karnataka Politics State

ಜೂನ್ 1 ರಿಂದ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ!

Bangalore : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾಗಿದ್ದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನಾಳೆಯೇ ಅನುಷ್ಠಾನಕ್ಕೆ ಬರಲಿದ್ದು, ಜೂನ್‌ 1ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಕ್ಕೆ ತರಲು ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ […]

Bengaluru Just In Karnataka Politics State

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ; ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪಿದ ನಾಯಕ!

ಮಹಾರಾಷ್ಟ್ರ ರಾಜ್ಯದಲ್ಲಿನ ಏಕೈಕ ಕಾಂಗ್ರೆಸ್ ಸಂಸದ ಬಾಲು ಧನೋರ್ಕರ್ (48) ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಬಾಲು ಧನೋರ್ಕರ್ ಅವರು ಮೂತ್ರಪಿಂಡದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ನಾಗ್ಪುರ ಮೂಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲಿ ಚಿಕಿತ್ಸೆ ಫಲ ನೀಡದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಧನೋರ್ಕರ್ ಅವರು ಚಂದ್ರಾಪುರ ಜಿಲ್ಲೆಯಲ್ಲಿ ಶಿವಸೇನೆಯಲ್ಲಿ […]

Bengaluru Just In Karnataka Politics State

ಸರ್ಕಾರಕ್ಕೆ ಗ್ಯಾರಂಟಿ ಸಂಕಷ್ಟ; ಗ್ಯಾರಂಟಿ ಅನುಷ್ಠಾನಕ್ಕಾಗಿ ಸಿದ್ದು ಚರ್ಚೆ! ಗ್ಯಾರಂಟಿ ಕಷ್ಟ….ಕಷ್ಟ….!

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬೇಕಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅವುಗಳಿಗೆ ತಗಲುವು ಲೆಕ್ಕಾಚಾರದ ಕುರಿತು ಅಂಕಿ-ಅಂಶ, ತಗಲುವ ಖರ್ಚಿನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಅವರು ಮೇ.29ರಂದು ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. […]

Bengaluru Just In Karnataka Politics State

Siddu Cabinet: ನೂತನ ಸಚಿವರಿಗೆ ಖಾತೆ ಹಂಚಿಕೆ ಕಾರ್ಯ ಅಂತಿಮ; ಯಾರಿಗೆ ಯಾವ ಖಾತೆ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಸಚಿವರಿಗೆ ಖಾತೆಗಳು ಕೊನೆಗೂ ಅಧಿಕೃತವಾಗಿವೆ (Cabinet). ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅಂಕಿತ ಹಾಕಿದ ಕೂಡಲೇ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ (Ramalingareddy) ಗೆ ಸಾರಿಗೆ ಖಾತೆಯೊಂದಿಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆ ನೀಡಲಾಗಿದೆ. ಸಮಾಜ ಕಲ್ಯಾಣ ಅಥವಾ ಕಂದಾಯ ಕುರಿತು ಒಲವು ಹೊಂದಿದ್ದರೆನ್ನಲಾದ ಕೆ.ಹೆಚ್ ಮುನಿಯಪ್ಪಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ […]

Bengaluru Just In Karnataka Politics State

ಯಾವ ಜಿಲ್ಲೆಗಳಿಗೆ ಸಿಕ್ತು ಮಂತ್ರಿ ಭಾಗ್ಯ? ಯಾವ ಜಿಲ್ಲೆಗಳಲ್ಲಿ ಆಕ್ರೋಶ?

Bangalore : ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ(Congress Government) ಸಂಪುಟ ವಿಸ್ತರಣೆಯಾಗಿದೆ (Karnataka Cabinet expansion). ಎರಡನೇ ಹಂತದಲ್ಲಿ 24 ಶಾಸಕರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಒಟ್ಟು 34 ಜನರ ಸಂಪುಟ ರಚನೆಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಬಿಡುಗಡೆ ಮಾಡಿದೆ. ಹಳಬರು ಹಾಗೂ ಹೊಸಬರ ತಂಡ ಸಿದ್ಧವಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಹಲವು ಜಿಲ್ಲೆಗಳಿಗೆ ಮಂತ್ರಿ ಭಾಗ್ಯ […]

Bengaluru Just In Karnataka Politics State

Siddaramaiah Cabinet: ಸಂಪುಟವೇನು ಭರ್ತಿಯಾಯಿತು; ಎಲ್ಲರೂ ಸಿಎಂಗೆ ವಿಧೇಯರಾಗಿರುತ್ತಾರೆಯೇ?

Bangalore : ಸಿಎಂ ಸಿದ್ದರಾಮಯ್ಯ ಸಂಪುಟ (Siddaramaiah Cabinet) ಸಂಪೂರ್ಣ ಭರ್ತಿಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಕೆಲವು ಹಿರಿಯರಿಗೆ ಕೊಕ್‌ ನೀಡಲಾಗಿದೆ. ಎರಡನೇ ಹಂತತದಲ್ಲಿ ಹಳಬರು ಹಾಗೂ ಹೊಸಬರನ್ನು ಒಳಗೊಂಡ 24 ಸಚಿವರು ಇಂದು(ಮೇ 27) ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಟ್ಟು 34 ಜನರ ಸರ್ಕಾರ ಅನುಭವಿ- ಉತ್ಸಾಹಿಗಳಿಂದ ಸಿದ್ದರಾಮಯ್ಯ ಸಂಪುಟ ಕೂಡಿದೆ. ಒಟ್ಟು 8 ಜನರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಡಿಸಿಎಂ ಡಿ.ಕೆ. […]

Bengaluru Just In Karnataka Politics State

Cabinet: ಹಿರಿಯರಿಗೆ ಸಿಗದ ಸಚಿವ ಸ್ಥಾನ; ರಾಜೀನಾಮೆಗೆ ಮುಂದಾದ ಬಿ.ಕೆ. ಹರಿಪ್ರಸಾದ್

Bangalore: ಸಿದ್ದರಾಮಯ್ಯ (Siddarmaiah) ಸರ್ಕಾರದ ಸಂಪುಟ ಸೇರಲು ಹಲವಾರು ಆಕಾಂಕ್ಷಿಗಳು ಪ್ರಯತ್ನಿಸಿದ್ದರು. ಕೊನೆಗೂ ಸಂಪುಟ ರಚನೆಯಾಗಿದ್ದು, ಹಲವು ಹಿರಿಯರಿಗೆ ಅವಕಾಶ ನೀಡಿಲ್ಲ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್(BK Hariprasad) ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್, 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ […]

Bengaluru Just In Karnataka Politics State

Siddu Cabinet: ಹಲವು ನಾಯಕರಿಗೆ ಸಚಿವ ಸ್ಥಾನ ಮಿಸ್; ತೀವ್ರ ಆಕ್ರೋಶ!

ಬೆಂಗಳೂರು : ಕಾಂಗ್ರೆಸ್‌ನ (Congress) 24 ಜನ ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಮಿಸ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ನಾಯಕರು ಮಂತ್ರಿಗಿರಿಗೆ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್‌ (High Command) ಯಾವುದೇ ಲಾಬಿಗೆ ಬಗ್ಗದೇ ತನ್ನದೇ ಮಾನದಂಡ ಬಳಸಿ ಮಂತ್ರಿ ಸ್ಥಾನಕ್ಕೆ ಶಾಸಕರನ್ನು ಆಯ್ಕೆ ಮಾಡಿದೆ. ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ನಿರಾಸೆಯಾಗಿದೆ. ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. […]