ಪ್ರಧಾನಿ ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಸಿದ್ಧವಾಗಲಿದೆ ಅಂತಾರಾಷ್ಟ್ರೀಯ ಕ್ರೀಡಾಂಗಣ!
ಉತ್ತರ ಪ್ರದೇಶ : ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತಲಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ವಾರಣಾಸಿ ಎಂಬುವುದು ಹಿಂದುಗಳ ಪಾಲಿಗೆ ಗೌರವ ಹಾಗೂ ಭಕ್ತಿಯ ಕೇಂದ್ರ. ಕೇವಲ ಧಾರ್ಮಿಕ ಕ್ಷೇತ್ರವಾಗಿದ್ದ ವಾರಣಾಸಿ ಇನ್ನು ಮುಂದೆ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ತಾಣವಾಗಲಿದೆ. ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಸೆಪ್ಟೆಂಬರ್ 23) ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು 30 ಸಾವಿರ ಪ್ರೇಕ್ಷಕರನ್ನು ಹೊಂದಬಹುದಾದ ದೊಡ್ಡ ಕ್ರೀಡಾಂಗಣವಾಗಿದೆ. ಭಾರತೀಯ […]