Dali Dhananjaya: ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ!
ಕನ್ನಡ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟ ಡಾಲಿ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳು ಪೂರೈಸಿವೆ. ಈ ದಶಕದ ಸಿನಿ ಪಯಣದಲ್ಲಿ ಡಾಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದಾರೆ. ಧನಂಜಯ್ ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೆನಹಳ್ಳಿ ಗ್ರಾಮದಲ್ಲಿ ಅವಿಭಕ್ತ ಕುಟುಂಬದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಲ್ಲಿ ತಮ್ಮ ತಂದೆಯೊಂದಿಗೆ ಹಳ್ಳಿಯಲ್ಲಿ ನಾಟಕ ನೋಡುತ್ತಾ, ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದರು. ಸದ್ಯ ಅವಮಾನ. ಟೀಕೆಗಳನ್ನೆಲ್ಲ ಮೆಟ್ಟಿ ಸಾಧನೆಯ ಉತ್ತುಂಗಕ್ಕೆ ಏರಿದ್ದಾರೆ. ಸಾಫ್ಟವೇರ್ ಇಂಜಿನಿಯರ್ ಆಗಿದ್ದ ಧನಂಜಯ್ ತಮ್ಮ […]