DB Inamdar: ಮಾಜಿ ಸಚಿವ ಡಿ.ಬಿ. ಇನಾಮದಾರ್ ವಿಧಿವಶ!
ಚನ್ನಮ್ಮನ ಕಿತ್ತೂರಿನಿಂದ 5 ಬಾರಿ ಶಾಸಕರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ್ ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾರೆ. 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್ 1983, 1985 ರಲ್ಲಿ ಜನತಾ ಪಕ್ಷದಿಂದ, 1994, […]