Narendra Modi: ಕರ್ನಾಟಕ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿಗೆ ಋಣಿಯಾಗಿರುತ್ತೇನೆ; ಮೋದಿ!
shivamogga : ಕರ್ನಾಟಕದ ಸಂಪೂರ್ಣ ಅಭಿವೃದ್ಧಿ ಮಾಡಿ, ನಿಮ್ಮ ಪ್ರೀತಿಯ ಬಡ್ಡಿ ತೀರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಆಯನೂರಿನಲ್ಲಿ ನಡೆದ ಚುನಾವಣಾ (Election) ಪ್ರಚಾರದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ (BS Yediyurappa) ಅವರ ನೆಲದಿಂದ ರಾಜ್ಯದ ಜನರಿಗೆ ಗ್ಯಾರಂಟಿ ನೀಡುತ್ತೇನೆ. ರಾಜ್ಯದಲ್ಲಿ ಒಂದು ಬಲೂನ್‍ಗೆ ಹವಾ ತುಂಬಿದೆ. ಸುಳ್ಳು ಗಾಳಿ ತುಂಬಿ ಬಲೂನ್ ಹಾರಿಸಲು ಹಲವರು ಯತ್ನಿಸುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮತದಾರರೇ ಆ ಬಲೂನ್ ನುಚ್ಚುನೂರು ಮಾಡಿದ್ದಾರೆ. ಹೆದರಿದ […]