ಇತ್ತೀಚೆಗಷ್ಟೇ ನಿಧನರಾಗಿದ್ದ ಆರ್.ಧ್ರುವನಾರಾಯಣ್ ಅವರ ಪತ್ನಿ ಇನ್ನಿಲ್ಲ
Mysore : ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಆರ್. ಧ್ರುವನಾರಾಯಣ ಅವರ ಪತ್ನಿ ನಿಧನರಾಗಿದ್ದಾರೆ. ವೀಣಾ ಧ್ರುವನಾರಾಯಣ(Veena Dhruvanarayana) ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೇ, ಇತ್ತೀಚೆಗಷ್ಟೇ ಪತಿ ಆರ್ ಧ್ರುವನಾರಾಯಣ (R Dhruvanarayana) ಅವರು ನಿಧನರಾಗಿದ್ದಕ್ಕೆ, ಮಾನಸಿಕವಾಗಿ ಕುಗ್ಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಣಾ ಧ್ರುವನಾರಾಯಣ (54) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಮಾರ್ಚ್ […]
