Karnataka Govt Jobs: ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಆಹ್ವಾನ
ಕರ್ನಾಟಕ ಸರ್ಕಾರದ ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ದಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಆಹ್ವಾನಿಸಲಾಗಿದೆ. ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಡಿಪ್ಲೋಮಾ ಪದವಿದರರು ಅರ್ಹತೆ ಹೊಂದಿದ್ದು, ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಪರಿಣಿತಿ ಹೊಂದಿರಬೇಕು. ಕೆಲವೊಮ್ಮೆ ಭಾರತ ಹಾಗೂ ಕರ್ನಾಟಕದಾದ್ಯಂತ ಪ್ರಯಾಣಿಸಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000 ವೇತನ ನೀಡಲಾಗುತ್ತದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದೆ. […]