Crime Story: ನಕಲಿ ಮದ್ಯ ಸೇವಿಸಿ 22 ಜನ ಸಾವು!
(Bihar) ದಲ್ಲಿ ಮದ್ಯ ನಿಷೇಧವಿದ್ದರೂ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುತ್ತಿರುವ ಘಟನೆಗಳು ಆಗಾಗ ವರದಿಯಾಗುತ್ತಲೇ ಇವೆ. ಈಗ ಮತ್ತೆ ಇಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, 22 ಜನ ಸಾವನ್ನಪ್ಪಿದ್ದಾರೆ. ಬಿಹಾರದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ 22 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್ 2016ರಲ್ಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು. […]