CM Siddaramaiah: ಸಭೆ- ಸಮಾರಂಭಗಳಲ್ಲಿ ಹಾರ- ತುರಾಯಿ ಬಳಸದಂತೆ ಸೂಚನೆ!
ಬೆಂಗಳೂರು : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಾನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ (Public Programme) ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಿ. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಬಸವರಾಜ […]