ನಮ್ಮ ರಾಜ್ಯ ದಿವಾಳಿಯಾಗಿಲ್ಲ ಮೋದಿಯವರೇ; ಸಿಎಂ
ಮೈಸೂರು : ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhakshmi Scheme) ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನೂರು ದಿನಗಳ ಸರ್ಕಾರದ ಸಾಧನೆಯ ಕೈಪಿಡಿ ಹೊರ ತರಲಾಗಿದೆ. ಗೃಹಲಕ್ಷ್ಮಿ ಯೋಜನೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಇದಕ್ಕೂ ಮುನ್ನ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈಗ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ನಾವು ಗ್ಯಾರಂಟಿಗಳನ್ನು […]