ರಾಜ್ಯದಲ್ಲಿ ಬಡವರ ಸಾವಿನ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರ; ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 36ರಷ್ಟು ವೈದ್ಯರ ಕೊರತೆ!
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞ ವೈದ್ಯರು, ನರ್ಸ್ ಸೇರಿದಂತೆ ರಾಜ್ಯದಲ್ಲಿ ಬರೊಬ್ಬರಿ 13,622 ಹುದ್ದೆಗಳು ಖಾಲಿ ಇವೆ. ಹೀಗಾಗಿ ಲಕ್ಷಾಂತರ ಜನ ರೋಗಿಗಳು ಪರದಾಡುವಂತಾಗಿದೆ. ರಾಜ್ಯದಲ್ಲಿನ ಒಟ್ಟು 911 ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ. ಗ್ರಾಮೀಣ ಭಾಗಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಮುಂದೆ ಸರದಿ ಸಾಲಿನಲ್ಲಿ ಚಿಕಿತ್ಸೆಗಾಗಿ ತಾಸುಗಟ್ಟಲೆ ನಿಂತು ಹೈರಾಣಾಗುತ್ತಿದ್ದಾರೆ. ಹೀಗಾಗಿ ಎಲ್ಲೆಡೆ ವೈದ್ಯಕೀಯ ಸಿಬ್ಬಂದಿ ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಲಾಗುತ್ತಿದೆ. ಸದ್ಯ ಮಂಜೂರಾಗಿರುವ 38,500 ಹುದ್ದೆಗಳ […]