GParameshwar: ಕನ್ನಡಿಗರಿಗೆ ಕೆಲಸ ನೀಡದಿದ್ದರೆ ಲೈಸೆನ್ಸ್ ರದ್ದು!
ತುಮಕೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳು ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕಂಪನಿಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಥಳೀಯರಿಗೆ ಕೆಲಸ ಕೊಡುತ್ತಿಲ್ಲ ಎನ್ನುವ ದೂರುಗಳು ಜಿಲ್ಲೆಯಲ್ಲಿ ಕೇಳಿ ಬಂದಿವೆ. ಈ ಕುರಿತು ಗಂಭೀರವಾಗಿ ಚಿಂತನೆ ನಡೆಸಿ, ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ತಮಗೆ ಕೆಲಸ ಸಿಗುತ್ತಿಲ್ಲ ಎಂದು ಯುವಕರು ಆತಂಕಪಡುವ ಅಗತ್ಯವಿಲ್ಲ. ನಮ್ಮ […]