Crime News: ಸಹಪಾಠಿ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ ವಿದ್ಯಾರ್ಥಿ!
ವಿದ್ಯಾರ್ಥಿಯೊಬ್ಬಾತ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ನಡೆದಿದೆ. ಸದ್ಯದ ಮಾಹಿತಿಯಂತೆ, ಮೃತ ವಿದ್ಯಾರ್ಥಿನಿಯು ಕಾನ್ಪುರದ ನಿವಾಸಿ ಎಂದು ಹೇಳಲಾಗಿದೆ. ಹತ್ಯೆ ಮಾಡಿದ ವಿದ್ಯಾರ್ಥಿಯನ್ನು ಅಮ್ರೋಹಾ ಮೂಲದವನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಕೊಲೆಗೆ ಕಾರಣ ಅಧಿಕೃತವಾಗಿ ತಿಳಿದು ಬಂದಿಲ್ಲ. ಆದರೆ, ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ವಿದ್ಯಾರ್ಥಿ ಮತ್ತು ಮೃತ ವಿದ್ಯಾರ್ಥಿನಿ ಗ್ರೇಟರ್ ನೋಯ್ಡಾದಲ್ಲಿರುವ […]