ಮನೆಯ ಯಜಮಾನಿಗೆ 2 ಸಾವಿರ ರೂ. ಅರ್ಜಿ ಹೇಗೆ ಸಲ್ಲಿಸಬೇಕು? ನಿಯಮ ಇಲ್ಲಿದೆ ನೋಡಿ!
ಬೆಂಗಳೂರು: ಕಾಂಗ್ರೆಸ್ (Congress) ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ 5 ಗ್ಯಾರಂಟಿಗಳನ್ನು (Guarantee)ಸಿಎಂ ಸಿದ್ದರಾಮಯ್ಯ (Siddaramaiah) ಶುಕ್ರವಾರ ಘೋಷಿಸಿದ್ದಾರೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯೂ (Gruha Lakshmi Scheme) ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮನೆ ಯಜಮಾನಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ನೀಡುತ್ತೇವೆ. ಇದಕ್ಕಾಗಿ ಮನೆ ಯಜಮಾನಿ ಯಾರು ಎಂಬುವುದನ್ನು ಮೊದಲು ಸ್ಪಷ್ಟಪಡಿಸಬೇಕು ಹಾಗೂ ಅವರ ಬಳಿ ಬ್ಯಾಂಕ್ […]