Kornersite

Bengaluru Just In Karnataka State

ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಕೆಲವೆಡೆ ಗುಡುಗು, ಸಿಡಿಲಿನ ಮಳೆ!

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಗುಡು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]

Bengaluru Just In Karnataka State

ರಾಜ್ಯದಲ್ಲಿ ಭಾರೀ ಮುಂಗಾರು ಕೊರತೆ; ಶೇ. 72ರಷ್ಟು ಕೊರತೆ! ಆಕಾಶದತ್ತ ಮುಖ ಮಾಡಿದ ರೈತರು!

ರಾಜ್ಯದಲ್ಲಿ ಮುಂಗಾರು ಆರಂಭದ ಮೊದಲ ವಾರವೇ ಕೊರತೆಯಾಗಿದ್ದು, ರೈತರು ಆತಂಕ ಪಡುವಂತಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲ ಶೇ. 72ರಷ್ಟು ಮಳೆ ಕೊರತೆಯಾಗಿದ್ದು, ಇದು ಕಳೆದ 28 ವರ್ಷದಲ್ಲಿ ಎದುರಾದ ಅತಿ ಹೆಚ್ಚಿನ ಮಳೆ ಕೊರತೆಯಾಗಿದೆ. ವಾಡಿಕೆಯಂದೆ ಜೂನ್‌ 1ರಿಂದ 10ರೊಳಗೆ ರಾಜ್ಯದಲ್ಲಿ ಸರಾಸರಿ 51.20 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ ಕೇವಲ 14 ಮಿ.ಮೀ ಮಾತ್ರ ಮಳೆಯಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ ಶೇ.72ರಷ್ಟುಕಡಿಮೆ ಮಳೆಯಾಗಿದೆ. 1995ರಲ್ಲಿ ಮೊದಲ ವಾರದಲ್ಲಿ ಶೇ.74ರಷ್ಟುಮಳೆ ಕೊರತೆ ಉಂಟಾಗಿತ್ತು. ಆನಂತರ 28 […]

Bengaluru Just In Karnataka State

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭರ್ಜರಿ ಮಳೆಯ ಸಾಧ್ಯತೆ!

ರಾಜ್ಯದ ಹಲವ ಜಿಲ್ಲೆಗಳಲ್ಲಿ ಜೂನ್ 20ರ ವರೆಗೆ ಭರ್ಜರಿ ಮಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬಿಪೋರ್ಜಾಯ್ […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 19ರ ವರೆಗೆ ಮಳೆರಾಯನ ಸಿಂಚನ!

ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರೈತರು ಸಂತಸ ಪಡುವ ಸಂಗತಿಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜೂನ್ 19ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ […]

Bengaluru Just In Karnataka State

Rain Update: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಹರ್ಷ!

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ. ಈಗಾಗಲೇ ಹವಾಮಾನ ಇಲಾಖೆ (Weather Department)ಯು ಮಳೆ ಮುನ್ಸೂಚನೆ ನೀಡಿದೆ. ರಾತ್ರಿ ಗುಡುಗು ಸಹಿತ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ವ್ಯಾಪಕ ಬಿಸಿಲಿನಿಂದ ಕೂಡಿದ್ದ ವಾತಾವರಣ ಈಗ ತಂಪಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ 35 ಮಿಲಿ ಮೀಟರ್ ನಷ್ಟು ಮಳೆ […]

Bengaluru Just In Karnataka National State

ದೇಶದಲ್ಲಿ ಹೆಚ್ಚಾದ ಬಿಪೋರ್ ಜಾಯ್ ಸೈಕ್ಲೋನ್ ಭೀತಿ; ತೀವ್ರ ಸ್ವರೂಪಕ್ಕೆ ತಿರುಗುವ ಸಾಧ್ಯತೆ!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದ ಪರಿಣಾಮ ನೈರುತ್ಯ ಮುಂಗಾರು ಮಾರುತಗಳು ಈ ಬಾರಿ ತಡವಾಗಿವೆ. ಈ ವಾಯುಭಾರ ಕುಸಿತವು ಚಂಡಮಾರುತದ ಸ್ವರೂಪಕ್ಕೆ ತಿರುಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಇದೇ ರೀತಿಯ ವಾಯುಭಾರ ಕುಸಿತ ಮುಂದುವರೆದರೆ ಅದು ಚಂಡಮಾರುತದ ರೂಪ ಪಡೆಯಲಿದ್ದು, ಈಗಾಗಲೇ ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂದು ಹೆಸರಿಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಈ ಚಂಡಮಾರುತವು ಉತ್ತರ ದಿಕ್ಕಿಗೆ ಚಲಿಸುವ ಸೂಚನೆ ನೀಡಿದೆ. ಈ ಮೂಲಕ ಭಾರತದ ಪಶ್ಚಿಮ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳೂ ಇವೆ. ಗೋವಾ ಹಾಗೂ […]

Bengaluru Just In Karnataka State

ರಾಜ್ಯದಲ್ಲಿ ಮುಂಗಾರಿನ ಎಂಟ್ರಿ ಯಾವಾಗ? ಎಲ್ಲೆಲ್ಲಿ ಮಳೆಯ ಸಾಧ್ಯತೆ?

ಮುಂಗಾರು ಮಳೆ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಮುಂದಿನ 24 […]

Bengaluru Just In Karnataka State

ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ 48 ಗಂಟೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿಯೇ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, […]

Bengaluru Just In Karnataka State

ರಾಜ್ಯಕ್ಕೆ ಮುಂಗಾರು ಯಾವಾಗ ಎಂಟ್ರಿ ಕೊಡಲಿದೆ? ಈ ಬಾರಿ ಹೇಗಿದೆ ಮುಂಗಾರು?

ಬೆಂಗಳೂರು : ರಾಜ್ಯದಲ್ಲಿ (Karnataka)ಜೂನ್ ಮೊದಲ ವಾರದಲ್ಲಿ ಮುಂಗಾರು(Monsoon) ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ಪ್ರವೇಶ ಮಾಡುವುದಕ್ಕೂ ಮುನ್ನ ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆರಾಯನ ಅಬ್ಬರ (Rain) ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮೇ 31 ರಿಂದ ಜೂನ್ 2ರ ವರೆಗೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯಕ್ಕೆ ಮಳೆಯ ತೀವ್ರತೆ […]

Bengaluru Just In Karnataka State

Rani Update: ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ; ನಿಮ್ಮ ಜಿಲ್ಲೆ ಇದೆಯಾ ನೋಡಿ?

ಬೆಂಗಳೂರು: ರಾಜ್ಯದಲ್ಲಿ ಜೂನ್ 2ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೆ ವ್ಯಾಪಕ ಮಳೆಯಾಗುವ ಸಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ […]