Kornersite

Bengaluru Just In Karnataka State

Rain Update: ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 1ರ ವರೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಕರಾವಳಿ ಪ್ರದೇಶದ ಇನ್ನೂ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಇದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]

Bengaluru Just In Karnataka Politics State

13 ಜನರನ್ನು ಬಲಿ ಪಡೆದ ಮಳೆರಾಯ; ಇಲ್ಲಿ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥ!

ಜೈಪುರ: ರಾಜಸ್ಥಾನದಲ್ಲಿ (Rajasthan) ಕಳೆದ ಎರಡು ವಾರಗಳಿಂದ ಭರ್ಜರಿಯಾಗಿ ಮಳೆ (Rain) ಹಾಗೂ ಚಂಡಮಾರುತದ (Thunderstorms) ಬೀಸಿದ್ದು, ಇಲ್ಲಿಯವರೆಗೆ 13 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಬೀಸಿದೆ. ಕೇವಲ ಎರಡು ದಿನಗಳಲ್ಲಿ 13 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿಯ ಟೋಂಕ್ ನಲ್ಲಯೇ 10 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಭಿಲ್ವಾರದ ಮಂಡಲ್‌ನಲ್ಲಿ 11 ಸೆಂ.ಮೀ ಮಳೆಯಾಗಿದ್ದು, ಹನುಮಾನ್‌ಗಢದ ರಾವತ್ಸರ್‌ನಲ್ಲಿ 6 […]

Bengaluru Just In Karnataka State

Rain Update: ಮೇ 30ರ ವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೆ ಮಳೆರಾಯ ಆರ್ಭಟಿಸುತ್ತಿದ್ದಾನೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ […]

Bengaluru Just In Karnataka State

Karnataka Rain: ರಾಜ್ಯದಲ್ಲಿ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಬಲಿ; ಅಪಾರ ಆಸ್ತಿ ಹಾನಿ!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಸಾವನ್ನಪ್ಪಿದ್ದು, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೇ, ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕರ್ತವ್ಯ ಲೋಪವೆಸಗಿದರೆ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ […]

Bengaluru Just In Karnataka State

ಚಿನ್ನಾಭರಣದ ಮಳಿಗೆಗೆ ನುಗ್ಗಿದ ನೀರು; ನೀರಲ್ಲಿ ಲೀನವಾದ ಚಿನ್ನಾಭರಣ!

ಬೆಂಗಳೂರಿನಲ್ಲಿ ನಿನ್ನೆ ಭರ್ಜರಿ ಮಳೆ ಸುರಿದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಾಕಷ್ಟು ಅವಾಂತರಗಳು ನಡೆದಿವೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಸಾಕಷ್ಟು ಹಾನಿ ಸಂಭವಿಸುವಂತಾಗಿದೆ. ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದ್ದು, ಮಳೆಯ ನೀರು ಅಂಗಡಿಗೆ ನುಗ್ಗಿ ಸುಮಾರು ಎರಡುವರೆ ಕೋಟಿ ರೂ. ನಷ್ಟವಾಗಿದೆ. ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ […]

Rain Update: ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ! ಕರ್ನಾಟಕದಲ್ಲಿ ಎಲ್ಲೆಲ್ಲಿ ಸಾಧ್ಯತೆ!

ನವದೆಹಲಿ : ಬಂಗಾಳಕೊಲ್ಲಿಯಲ್ಲಿ (Bay of Bengal) ಸೃಷ್ಟಿಯಾಗಿರುವ ಮೋಚಾ ಚಂಡಮಾರುತ (Cyclone Mocha) ತೀವ್ರ ಸ್ವರೂಪ ತಾಳಿದ್ದು, ಪೋರ್ಟ್‌ ಬ್ಲೇರ್‌ ನಿಂದ 520 ಕಿ.ಮೀ ದೂರದ ಆಗ್ನೇಯ ದಿಕ್ಕಿನಲ್ಲಿ ಚಲಿಸುತ್ತಿದೆ. ಮೋಚಾ ಚಂಡಮಾರುತ ಜನತೆಯನ್ನು ಭೀತಿಗೆ ತಳ್ಳಿದೆ. ಇದು ಕರಾವಳಿ ಭಾಗದಲ್ಲಿ ಇದರ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಬಂಗಾಳ (West Bengal) ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತ್ರಿಪುರಾ, ಮಿಜೋರಾಂ ಮತ್ತು ಬಂಗಾಳದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ!

ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಹಗುರಾಗಿ ಮಳೆಯಾಗುವ […]

Bengaluru Just In Karnataka State

Rain Update: ರಾಜ್ಯದಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ!

Bangalore : ರಾಜ್ಯದಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹಲವು ಪ್ರದೇಶಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಏ. 27ರಿಂದ ಮೇ 1ರ ವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏ.27, ಏ. 28 ಮತ್ತು ಮೇ 1 ರಂದು ಉತ್ತರ ಒಳನಾಡಿನ ಬಾಗಲಕೋಟೆ, […]

Bengaluru Just In Karnataka State

Rain Update: ರಾಜ್ಯದಲ್ಲಿ ಮೂರು ದಿನ ಇರಲಿದೆ ಮಳೆಯ ಅಬ್ಬರ!

bangalore : ರಾಜ್ಯದಲ್ಲಿ ಇಂದು ರಾತ್ರಿಯಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಬೆಂಗಳೂರು ನಗರದಲ್ಲಿ 5 ದಿನಗಳ ಕಾಲ ಮಳೆಯಾಗುವ (Bengaluru Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲಿಗೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಹೆಚ್ಚಿನ […]

Bengaluru Just In Karnataka State

Rain Update : ರಾಜ್ಯದ ಹಲವು ಪ್ರದೇಶಗಳಲ್ಲಿ 3 ದಿನ ಮಳೆಯ ಮುನ್ಸೂಚನೆ!

Bangalore : ತಮಿಳುನಾಡಿನಲ್ಲಿ ಟ್ರಫ್‌ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Rain) ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಏ. 23ರ ವರೆಗೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರು ನಗರಕ್ಕೆ ಇಂದು ವರುಣನ ಸಿಂಚನವಾಗಿದೆ. ರಾಜಧಾನಿಯ ಬ್ಯಾಟರಾಯನಪುರ, […]