Crime News: ಸಬ್ ಇನ್ಸ್ ಪೆಕ್ಟರ್ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಹಾಸನ : ಮಹಿಳಾ ಸಬ್ ಇನ್ಸ್ ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ (Fire) ಹಚ್ಚಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ (PSI) ಶೋಭಾ ಭರಮಕ್ಕನವರ್ ಅವರು ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್ ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು […]