Kornersite

Crime Just In Karnataka State

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ! ಐವರಿಗೆ ಚಾಕು ಇರಿತ!

ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಹತ್ತಿರ ಕಳೆದ ರಾತ್ರಿ ನಡೆದಿದೆ. ಘಟನೆಯಲ್ಲಿ ಐವರಿಗೆ ಚಾಕು ಇರಿಯಲಾಗಿದ್ದು, ಆ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಹಾಗೂ ಕಿರಣ್ ಸ್ನೇಹಿತರಾಗಿದ್ದು, ಇವರ ಗುಂಪುಗಳ ಮಧ್ಯೆಯೇ ಸಂಘರ್ಷ ನಡೆದಿದೆ. ಕಳೆದ ಕೆಲವು ವರ್ಷಗಳಿಂದ ಈ ಗುಂಪುಗಳ ಮಧ್ಯೆ ಸಣ್ಮಪುಟ್ಟ ಗಲಾಟೆ ನಡೆಯುತ್ತಿತ್ತು. ಅಲ್ಲದೇ, ಕಳೆದ ರಾತ್ರಿ ನೇತಾಜಿ ಸರ್ಕಲ್ ನಲ್ಲಿ ಇಬ್ಬರ ಮಧ್ಯೆ […]

Just In Karnataka State

ಅಚ್ಚರಿ! 9 ಬಾರಿ ಹಾವಿನಿಂದ ಕಚ್ಚಿಸಿಕೊಂಡರೂ ಬದುಕುಳಿದ ಬಾಲಕ

ಹಾವು ಎಂದರೆ ಎಲ್ಲರಿಗೂ ಭಯ. ಆದರೆ, ಇಲ್ಲೊಬ್ಬ ಬಾಲಕನಿಗೆ ಬರೋಬ್ಬರಿ 9 ಬಾರಿ ಹಾವು ಕಚ್ಚಿದೆ. ಆದರೂ ಆತ, ಆರೋಗ್ಯವಾಗಿಯೇ ಇದ್ದಾನೆ ಎನ್ನಲಾಗಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್ ಗೆ ಜುಲೈ 3ರಂದು ಮನೆಯ ಮುಂದೆ ಆಡುವಾಗ ಹಾವು (Snake Bite) ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಎಂದು ಬಾಲಕ ಹೇಳಿದ್ದಕ್ಕೆ ಆತನನ್ನು […]

Bengaluru Crime Just In Karnataka State

ಬ್ಲೇಡ್ ನಿಂದ ಮಗುವಿನ ಕೈ ಕೊಯ್ದು; ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ತುಮಕೂರು: ತಾಯಿಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಪಟ್ಟಣದ ಡೂಮ್ಲೈಟ್ ವೃತ್ತದ ಹತ್ತಿರ ತಿಪ್ಪಾಪುರ ಛತ್ರದ ಹಿಂಭಾಗದ ನಿವಾಸಿ ಶಿವಾನಂದ ಎಂಬುವವರ ಪತ್ನಿ ಶ್ವೇತಾ (28) ಎಂಬ ಮಹಿಳೆಯೇ ತನ್ನ ಮಗಳ ಕೈಯನ್ನು ಬ್ಲೇಡ್ ನಿಂದ ಕೊಯ್ದು, ನಂತರ ತಾನೂ ಕೊಯ್ದುಕೊಂಡಿದ್ದಾಳೆ. ಮಗುವಿನ ಕೈ ಕೊಯ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಇದನ್ನು ಕಂಡ ಕೂಡಲೇ ಸ್ಥಳೀಯರು […]

Crime Just In Karnataka State

ಜಾತ್ರಾ ಮಹೋತ್ಸವದಲ್ಲಿ ಗದ್ದಲ; ಅಗ್ನಿ ಕುಂಡಲದಲ್ಲಿ ಬಿದ್ದು 30 ಜನ; ಹಲವರ ಸ್ಥಿತಿ ಗಂಭೀರ!

ಜಾತ್ರಾ ಮಹೋತ್ಸವದಲ್ಲಿ (Festival) ನೂಕುನುಗ್ಗಲು ಉಂಟಾಗಿದ್ದರಿಂದಾಗಿ ಅಗ್ನಿ ಕುಂಡದಲ್ಲಿ ಬಿದ್ದು 30 ಜನರು ಗಾಯಗೊಂಡಿರುವ (Injur) ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ (Turuvekere) ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 35 ವರ್ಷಗಳ ನಂತರ ರಾಮಲಿಂಗೇಶ್ವರ ಹಾಗೂ ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆದಿದೆ. ಈ ಜಾತ್ರೆಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಹರಕೆ ನಿಮಿತ್ತ ಕೆಂಡದ ಕುಂಡ ನಿರ್ಮಿಸಲಾಗಿತ್ತು. ಅಗ್ಗಿ ಹಾಯುವ ವೇಳೆ ನೂಕುನುಗ್ಗಲೂ ಸಂಭವಿಸಿ ಕೆಳೆಗೆ ಬಿದ್ದು 30 ಜನ ಗಾಯೊಂಡಿದ್ದಾರೆ. ಈ […]

Bengaluru Just In Karnataka State

ಒಂದು ಗಂಟೆಯಲ್ಲಿ ಆಗಬೇಕಿದ್ದ ಶಸ್ತ್ರ ಚಿಕಿತ್ಸೆ ಕೇವಲ ಎರಡೂವರೆ ನಿಮಿಷದಲ್ಲಿ!

ಬೆಂಗಳೂರು: ಕೇವಲ ಎರಡೂವರೆ ನಿಮಿಷದಲ್ಲಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ವೈದ್ಯರ ತಂಡವೊಂದು ಅಚ್ಚರಿ ಮೂಡಿಸಿದೆ. ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ಡಾ ವಿಕ್ರಂ ಹುಡೇದ್ ಹಾಗೂ ಅವರ ತಂಡ 47 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ ಎರಡೂವರೆ ನಿಮಿಷದಲ್ಲಿ ಬ್ರೈನ್ ಆಪರೇಷನ್ ಮಾಡಿ ವೈದ್ಯ ಲೋಕವೇ ಆಶ್ಚರ್ಯ ಪಡುವಂತೆ ಮಾಡಿದ್ದಾರೆ. ಬ್ರೈನ್ ಅನ್ಯೂರಿಸಂ ಎನ್ನುವ ಕಾಯಿಲೆಗೆ ಡಾ. ವಿಕ್ರಂ ಹುಡೆದ್ ಡಿವೈಸ್ ಒಂದರ ಮೂಲಕ ಕಾಲಿನಿಂದ ತಲೆಗೆ ಸಂಪರ್ಕ ಕಲ್ಪಿಸಿ ಬ್ರೈನ್ ಒಳಗೆ ಉಂಟಾಗಿದ್ದ ಗುಳ್ಳೆಯ […]

Bengaluru Crime Just In Karnataka State

ದಶರಥ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ; ಇಬ್ಬರ ಸ್ಥಿತಿ ಚಿಂತಾಜನಕ!

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮತ್ತೊಮ್ಮೆ ಅಪಘಾತವಾಗಿದ್ದು, ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ (Bengaluru–Mysuru Expressway) ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು (Bengaluru) ಮಾರ್ಗದಿಂದ ಮೈಸೂರಿನತ್ತ ತೆರಳುತ್ತಿದ್ದ ಕಾರು ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರಿನ ಮುಂದೆ-ಹಿಂದೆ […]

Bengaluru Just In Karnataka Politics State

ರಾಜ್ಯದಲ್ಲಿ ಬಡವರ ಸಾವಿನ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರ; ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 36ರಷ್ಟು ವೈದ್ಯರ ಕೊರತೆ!

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞ ವೈದ್ಯರು, ನರ್ಸ್‌ ಸೇರಿದಂತೆ ರಾಜ್ಯದಲ್ಲಿ ಬರೊಬ್ಬರಿ 13,622 ಹುದ್ದೆಗಳು ಖಾಲಿ ಇವೆ. ಹೀಗಾಗಿ ಲಕ್ಷಾಂತರ ಜನ ರೋಗಿಗಳು ಪರದಾಡುವಂತಾಗಿದೆ. ರಾಜ್ಯದಲ್ಲಿನ ಒಟ್ಟು 911 ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ. ಗ್ರಾಮೀಣ ಭಾಗಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಮುಂದೆ ಸರದಿ ಸಾಲಿನಲ್ಲಿ ಚಿಕಿತ್ಸೆಗಾಗಿ ತಾಸುಗಟ್ಟಲೆ ನಿಂತು ಹೈರಾಣಾಗುತ್ತಿದ್ದಾರೆ. ಹೀಗಾಗಿ ಎಲ್ಲೆಡೆ ವೈದ್ಯಕೀಯ ಸಿಬ್ಬಂದಿ ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಲಾಗುತ್ತಿದೆ. ಸದ್ಯ ಮಂಜೂರಾಗಿರುವ 38,500 ಹುದ್ದೆಗಳ […]

Crime International Just In

Afghanistan: ವಿಷಪ್ರಾಶನ ಮಾಡಿದ ದುಷ್ಕರ್ಮಿಗಳು; 80 ವಿದ್ಯಾರ್ಥಿನಿಯರು ಅಸ್ವಸ್ಥ!

ಅಫ್ಘಾನಿಸ್ತಾನದ ಶಾಲೆಯಲ್ಲಿ 80 ಜನ ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಿರುವ ಹಿನ್ನೆಲೆಯಲ್ಲಿ ಅವರೆಲ್ಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳಂತೆ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಹೇಳಿದ್ದಾರೆ. ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ […]

International Just In

ಬಾಲಕನ ಹೊಟ್ಟೆಯಲ್ಲಿ ಬರೋಬ್ಬರಿ 40 ಚ್ಯೂಯಿಂಗ್ ಗಮ್!

ಅಮೆರಿಕದ (America) 5 ವರ್ಷದ ಬಾಲಕನೊಬ್ಬ 40 ಚ್ಯೂಯಿಂಗ್‌ ಗಮ್‌ (Chewing Gum) ನುಂಗಿದ ಪರಿಣಾಮ ಜಠರದಲ್ಲಿ ಸಮಸ್ಯೆಯಾಗಿ ಗಂಭೀರ ಸಮಸ್ಯೆ ಎದುರಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೊಟ್ಟೆ ಸಮಸ್ಯೆಯಿಂದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಹೊಟ್ಟೆ ಸ್ಕ್ಯಾನ್‌ ಮಾಡಿದಾಗ, ಹೆಚ್ಚಿನ ಪ್ರಮಾಣದ ಚ್ಯೂಯಿಂಗ್‌ ಗಮ್‌ ನುಂಗಿರುವುದು ಪತ್ತೆಯಾಗಿದೆ. ಜೀರ್ಣವಾಗದ ಈ ಪದಾರ್ಥ ಬಾಲಕನ ಜಠರದಲ್ಲಿ ಅಡಚಣೆ ಉಂಟು ಮಾಡಿತ್ತು ಎಂದು ವೈದ್ಯರು ಹೇಳಿದ್ದಾರೆ. ವೈದ್ಯರು ಅವನ ಗಂಟಲಿನ ಕೆಳಗೆ ಲೋಹದ ಟ್ಯೂಬ್ ಇರಿಸುವ ಮೂಲಕ ಚ್ಯೂಯಿಂಗ್‌ […]

Bengaluru Just In Karnataka State

ರಾಯಚೂರಿನಲ್ಲಿ ಮತ್ತೊಂದು ಕಲುಷಿತ ನೀರಿನ ಪ್ರಕರಣ ಬೆಳಕಿಗೆ; 20ಕ್ಕೂ ಅಧಿಕ ಜನರು ತೀವ್ರ ಅಸ್ವಸ್ಥ!

ರಾಯಚೂರು: ಇತ್ತೀಚಿಗಷ್ಟೇ ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತುಗೊಂಡಿದ್ದರು. ಸದ್ಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20 ಕ್ಕು ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊರೆಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಜನರು […]