Karnataka Assembly Election: ಬಂಡಾಯ ಎದ್ದು ಸ್ಪರ್ಧಿಸಿದವರಿಗೆ ಬಿಗ್ ಶಾಕ್!
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಬಂಡಾಯವೆದ್ದಿರುವ 24 ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಲಾಗಿದೆ. ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಟಿಕೆಟ್ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಅಲ್ಲದೇ, ಹಲವರು ಪಕ್ಷದ ಬಾವುಟ ಉಪಯೋಗಿಸಿ ಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಶಿಸ್ತು ಕ್ರಮ ಕೈಗೊಂಡಿದೆ. ಬಂಡಾಯವೆದ್ದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದೆ. […]