Karnataka Assembly Election: 30 ವರ್ಷಗಳಿಂದ ದುಡಿದ ಪಕ್ಷ ಬಿಟ್ಟು, ಕೈ ಹಿಡಿದ ಶೆಟ್ಟರ್!
Bangalore : ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಕೊನೆಗೂ ಇಷ್ಟು ವರ್ಷ ದುಡಿದ ಪಕ್ಷ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ‘ಕೈ’ ಬಾವುಟ ಹಿಡಿದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್‌ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶೆಟ್ಟರ್ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. […]