ಪವಿತ್ರ ಅಮರನಾಥ ಯಾತ್ರೆಗೆ ಸಿದ್ಧತೆ; ಜುಲೈ 1 ರಿಂದ ಆರಂಭ!
ಈ ವರ್ಷ ಜುಲೈ 1ರಿಂದ ಪ್ರಸಿದ್ಧ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಆಗಸ್ಟ್ 31 ರವರೆಗೆ ಅವಕಾಶ ನೀಡಲಾಗಿದೆ. ಅಂದರೆ ಒಟ್ಟು 62 ದಿನಗಳ ಕಾಲ ಪವಿತ್ರ ಅಮರನಾಥ ಯಾತ್ರೆ ನಡೆಯಲಿದ್ದು, ಅಲ್ಲಿನ ಜಮ್ಮು- ಕಾಶ್ಮೀರ ಸರ್ಕಾರ ಭರದ ಸಿದ್ಧತೆ ಮಾಡಿಕೊಂಡಿದೆ. ಮುಂದಾಲೋಚನೆಯ ಹಿನ್ನೆಲೆಯಲ್ಲಿ ಅಲ್ಲಿನ ವೈದ್ಯರ ರಜೆಯನ್ನು ರದ್ದುಗೊಳಿಸಲಾಗಿದೆ. ಇದರೊಂದಿಗೆ ಹಲವಾರು ವಿಶೇಷ ಆದೇಶಗಳನ್ನು ಹೊರಡಿಸಲಾಗಿದೆ. ಅಮರನಾಥ ಯಾತ್ರೆಯು ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಟ್ರ್ಯಾಕ್ ಮತ್ತು ಗಂಡರ್ಬಾಲ್ ಜಿಲ್ಲೆಯ ಬಲ್ಟಾಲ್ ಎಂಬ ಎರಡು ಮಾರ್ಗಗಳಿಂದ ಪ್ರಾರಂಭವಾಗುತ್ತದೆ. ಹೀಗಾಗಿ […]