Kornersite

Bengaluru Just In Karnataka State

Lecture Job: 4055 ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಹೇಗೆ ಸಲ್ಲಿಸಬೇಕು?

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಿಣಿಕ ವರ್ಷದಲ್ಲಿ 4,055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪಿಯು ಇಲಾಖೆ, ಕಾಲೇಜುಗಳಿಗೆ ಸೂಚಿಸಿದೆ. ಬಡ್ತಿ, ನಿಧನ, ವಯೋನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬಹುದು. ಒಟ್ಟಾರೆ 4055 ಹುದ್ದೆ ನೇಮಕ ಮಾಡಿಕೊಳ್ಳಬಹುದು ಎಂದು ಇಲಾಖೆಯು ಕಾಲೇಜುಗಳು, ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಿದೆ. ಪ್ರತಿ ತಿಂಗಳು 12 ಸಾವಿರದಂತೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.