ಶಾಸಕರು ಪ್ರಯಾಣಿಸುತ್ತಿದ್ದ ಕಾರಿನ ಟೈರ್ ಸ್ಪೋಟ!
ತೆಲಂಗಾಣ ಶಾಸಕರು ಪ್ರಯಾಣಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಅವರ ಕಾರಿನ ಟೈರ್ ಸ್ಪೋಟವಾಗಿದ್ದು. ಉಡುಪಿಯ ಕಾರ್ಕಳ ತಾಲೂಕಿನ ಮಿಯ್ಯಾರು ಸೇತುವೆ ಬಳಿ ವೇಗವಾಗಿ ಕಾರು ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊದೆದಿದೆ. ಆದರೆ ಚಾಲಕನ ಸಮಯ ಪ್ರಜ್ನೆಯಿಂದ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಕಾರಿನಲ್ಲಿ ಇದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.