Kornersite

Bengaluru Just In Karnataka Politics State

ಕಾಂಗ್ರೆಸ್ ನವರಿಗೆ ಎಚ್ಚರಿಕೆ ಕೊಟ್ಟ ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ನೂತನ ರಾಜ್ಯಾಧ್ಯಕ್ಷರಾದ ಮೊದಲನೇ ದಿನ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ ವಿಜಯೇಂದ್ರ(BY Vijayendra). ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ(Amit shah) ಹಾಗೂ ಜೆ.ಪಿ ನಡ್ಡಾ(J.P Nadda) ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ […]

Bengaluru Just In Karnataka Kornotorial Politics State

ಬಿ.ವೈ ವಿಜಯೇಂದ್ರ ಮುಂದಿರುವ 5 ಸವಾಲುಗಳು

ಮುಂಬರುವ ಲೋಕಸಭೆ ಚುನಾವಣೆ, ಬಿಜೆಪಿ ಜೆಡಿಎಸ್ ಮೈತ್ರಿ ಗದ್ದಲ, ಆಪರೇಷನ್‌ ಹಸ್ತ ಸೇರಿದಂತೆ ಬಿವೈ ವಿಜಯೇಂದ್ರ ಅವರ ಮುಂದೆ ಸಾಲು ಸಾಲು ಸವಾಲುಗಳಿವೆ. ಶಿಕಾರಿಪುರ ಶಾಸಕನ ಮುಂದಿನ ಶಿಕಾರಿ ಅಷ್ಟು ಸುಲಭವೇನಲ್ಲ. ಹಲವು ಅಡೆತಡೆಗಳನ್ನು ದಾಟಿಯೇ ಸ್ಥಾನವನ್ನು ಉಳಿಸಿಕೊಂಡು ಪಕ್ಷವನ್ನು ಮುನ್ನಡೆಸಿ ಕಟ್ಟಬೇಕಿದೆ. ಹಾಗಾದರೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮುಂದಿರುವ 5 ಸವಾಲುಗಳೇನು? ಮೊದಲನೇ ಸವಾಲು- ಪಕ್ಷದಲ್ಲಿ ಹಿಡಿತ ಸಾಧಿಸಿಕೊಳ್ಳಲು ಹಿರಿಯರು, ಕಿರಿಯರು ಸೇರಿ ಇತರ ಎಲ್ಲಾ ಮುಖಂಡರ ವಿಶ್ವಾಸ ಅತ್ಯಂತ ಅಗತ್ಯವಾಗಿದೆ. ಸದ್ಯ […]

Just In Sandalwood

ರಾಜ್ಯದ ಪರಿಸ್ಥಿತಿ ಸರಿಯಿಲ್ಲ, ಹುಟ್ಟು ಹಬ್ಬ ಬೇಡ!

ನಟಿ ರಚಿತಾ ರಾಮ್ ತಮ್ಮ ಹುಟ್ಟು ಹಬ್ಬದ ಕುರಿತು ಅಭಿಮಾನಿಗಳಿಗೆ ಸಂದೇಶವೊಂದು ನೀಡಿದ್ದಾರೆ. ಅವರು ಈ ಕುರಿತು ಟ್ವೀಟ್ ಮಾಡಿದ್ದು, ‘ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ’ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. “ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಈ ವರ್ಷ ನನ್ನ ಜನ್ಮ,ದಿನವನ್ನು ಆಚರಿಸುವುದು ಸೂಕ್ತವಲ್ಲ ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ .. ನಿಮ್ಮ ರಚ್ಚು” ಎಂದು […]

Bengaluru Just In Karnataka National State

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್ ಪಾದಾರ್ಪಣೆ; 2 ಐಟಿ ನಗರಗಳ ನಡುವೆ ಸಂಚಾರ!

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿತ್ತು. ಹೈದರಾಬಾದ್‌ ನ ಕಾಚಿಗುಡ – ಯಶವಂತಪುರ ನಿಲ್ದಾಣದ ಮಧ್ಯೆ ಈ ರೈಲು ಸಂಚರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ. 24ರಂದು ಈ ರೈಲಿಗೆ ಚಾಲನೆ ನೀಡಲಿದ್ದಾರೆ. ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ […]

Just In Karnataka State

ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ; ಹೆಚ್ಚಾಗುತ್ತಿದೆ ಹೋರಾಟ!

ಸುಪ್ರೀಂ ಕೋರ್ಟ್ (Supreme Court) ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿದೆ ಹೀಗಾಗಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ತಮಿಳುನಾಡಿಗೆ (TamilNadu) 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ.ಕೆಆರ್‌ಎಸ್ ಜಲಾಶಯದ (KRS Reservoir) ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ. 5,845 ಕ್ಯೂಸೆಕ್ ಇದ್ದ […]

Bengaluru Just In Karnataka State

ವಿದ್ಯಾರ್ಥಿಗಳ ಶ್ರೇಯಾಂಕದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಮೇಲುಗೈ!

ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಳೆದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ವಿಶ್ಲೇಷಣಾತ್ಮಕ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ 8ನೇ ತರಗತಿಗಿಂತ 5ನೇ ಕ್ಲಾಸ್ ಮಕ್ಕಳೇ ಮುಂದಿದ್ದಾರೆ. ಗ್ರಾಮೀಣರು ಮತ್ತು ಬಾಲಕಿಯರು ಮೇಲುಗೈ ಸಾಧಿಸಿದ್ದು, 5ನೇ ತರಗತಿಯಲ್ಲಿ ಸರ್ಕಾರಿ ಶಾಲೆ ಹಾಗೂ 8ನೇ ತರಗತಿಯಲ್ಲಿ ಖಾಸಗಿ ಶಾಲೆ ವಿದ್ಯಾರ್ಥಿಗಳು ಮುಂದಿದ್ದಾರೆ ಎಂದು ತಿಳಿದು ಬಂದಿದೆ.ಪ್ರಸಕ್ತ ಸಾಲಿನ ರಾಜ್ಯ ಪಠ್ಯ ಕ್ರಮದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಯ 5ನೇ […]

Just In Karnataka Politics State

ನಮ್ಮ ರಾಜ್ಯ ದಿವಾಳಿಯಾಗಿಲ್ಲ ಮೋದಿಯವರೇ; ಸಿಎಂ

ಮೈಸೂರು : ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhakshmi Scheme) ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನೂರು ದಿನಗಳ ಸರ್ಕಾರದ ಸಾಧನೆಯ ಕೈಪಿಡಿ ಹೊರ ತರಲಾಗಿದೆ. ಗೃಹಲಕ್ಷ್ಮಿ ಯೋಜನೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಇದಕ್ಕೂ ಮುನ್ನ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈಗ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ನಾವು ಗ್ಯಾರಂಟಿಗಳನ್ನು […]

Just In Karnataka State

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಕೆಲವು ದಿನಗಳಿಂದ ಕೈ ಕೊಟ್ಟಿದ್ದ ಮಳೆರಾಯ ಇಂದಿನಿಂದ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ ತಿಂಗಳ ಮಳೆಯ ಅಂಕಿ ಅಂಶಗಳನ್ನು ಗಮನಿಸುವುದಾದರೆ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಶೇ. 74ರಷ್ಟು ಮಳೆ ಕೊರತೆಯಾಗಿದೆ.

Crime Just In Karnataka State

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ-ಸಾವಿನ ಸಂಖ್ಯೆ 3ಕ್ಕೆ ಏರಿದೆ

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಮಾಡಿ 70 ಕ್ಕೂ ಹೆಚ್ಚು ಜನರು ಅಸ್ವಸ್ಥತಾಗಿದ್ದಾರೆ. ಈಗಾಗಲೇ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈ ಅಸ್ವಸ್ಥರಲ್ಲಿ ಮಕ್ಕಳು ಸಹ ಇದ್ದಾರೆ. ಯಾರೋ ಮಾಡಿದ ತಪ್ಪಿಗೆ ಇನ್ಯಾರದ್ದು ಬಲಿ ಎಂಬಂತಾಗಿದೆ ಚಿತ್ರದುರ್ಗದ ಪ್ರಕರಣ. ಇದೀಗ ಈ ಕೇಸ್ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನೀರಗಂಟಿಯ ಮಗಳು ದಲಿತ ಹುಡುಗನನ್ನು ಪ್ರೀತಿಸಿದ್ದಾಳೆ. ಇದೇ ಕಾರಣಕ್ಕೆ ಈ ದುರ್ಘಟನೆ ನಡಿದಿದೆ ಎಂದು ಹೇಳಲಾಗುತ್ತಿದೆ. ದಲಿತರು ಹಾಗೂ ಸವರ್ಣಿಯರ ನಡುವಿನ ಹಳೇ ವೈಷಮ್ಯವೇ ಇದಕ್ಕೆಲ್ಲ ಕಾರಣ. ಕವಾಡಗರಹಟ್ಟಿಯ […]

Bengaluru Just In Karnataka State

ಕರ್ನಾಟಕದ ಹಲವೆಡೆ ಪ್ರವಾಹ: ಕ್ಷೇಮವಾಗಿರು ಕರ್ನಾಟಕ!

ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕರ್ನಾಟಕದ ಹಲವೆಡೆ ಪ್ರವಾಹ ಉಂಟಾಗುತ್ತಿದೆ. ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಹಿರಣ್ಯಕೇಶಿ, ಘಟಪ್ರಭಾ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಆತಂಕ ಹೆಚ್ಚಾಗುತ್ತಿದೆ. ಕೃಷ್ಣಾ ನದಿಗೆ 92 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ದೂದ್‌ಗಂಗಾ ನದಿಗೆ 20 ಸಾವಿರ ಕ್ಯುಸೆಕ್‌ನಷ್ಟು ಒಳಹರಿವು ಹೆಚ್ಚಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ. ನದಿ ತೀರಕ್ಕೆ ಜನರು ಹೋಗದಂತೆ ಸದಲಗಾ ಪೊಲೀಸರು ಸದಲಗಾ ಪಟ್ಟಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ದೂಧ್‌ಗಂಗಾ ನದಿಗೆ ಅಡ್ಡಲಾಗಿ […]