Kornersite

Bengaluru Just In Karnataka State

ಗೃಹ ಜ್ಯೋತಿ ಯೋಜನೆ: ಅರ್ಜಿ ಸಲ್ಲಿಕೆ ಆರಂಭ; ಹಲವೆಡೆ ಸರ್ವರ್ ಡೌನ್!

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿನ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿತ್ತು. ಹೀಗಾಗಿ ಇಂದಿನಿಂದ ಈ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದರು. ಆದರೆ, […]

Bengaluru Just In Karnataka State

ರಾಜ್ಯದಲ್ಲಿ ಭಾರೀ ಮುಂಗಾರು ಕೊರತೆ; ಶೇ. 72ರಷ್ಟು ಕೊರತೆ! ಆಕಾಶದತ್ತ ಮುಖ ಮಾಡಿದ ರೈತರು!

ರಾಜ್ಯದಲ್ಲಿ ಮುಂಗಾರು ಆರಂಭದ ಮೊದಲ ವಾರವೇ ಕೊರತೆಯಾಗಿದ್ದು, ರೈತರು ಆತಂಕ ಪಡುವಂತಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲ ಶೇ. 72ರಷ್ಟು ಮಳೆ ಕೊರತೆಯಾಗಿದ್ದು, ಇದು ಕಳೆದ 28 ವರ್ಷದಲ್ಲಿ ಎದುರಾದ ಅತಿ ಹೆಚ್ಚಿನ ಮಳೆ ಕೊರತೆಯಾಗಿದೆ. ವಾಡಿಕೆಯಂದೆ ಜೂನ್‌ 1ರಿಂದ 10ರೊಳಗೆ ರಾಜ್ಯದಲ್ಲಿ ಸರಾಸರಿ 51.20 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ ಕೇವಲ 14 ಮಿ.ಮೀ ಮಾತ್ರ ಮಳೆಯಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ ಶೇ.72ರಷ್ಟುಕಡಿಮೆ ಮಳೆಯಾಗಿದೆ. 1995ರಲ್ಲಿ ಮೊದಲ ವಾರದಲ್ಲಿ ಶೇ.74ರಷ್ಟುಮಳೆ ಕೊರತೆ ಉಂಟಾಗಿತ್ತು. ಆನಂತರ 28 […]

Crime Just In Karnataka State

ಶಾಲಾ ಮಕ್ಕಳಿಂದ ಮನೆ ಕೆಲ ಮಾಡಿಸುತ್ತಿದ್ದ ಶಿಕ್ಷಕನಿಗೆ ಸಿಕ್ತು ಗೇಟ್ ಪಾಸ್

ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕ್ಷಕನೊಬ್ಬ ಮಕ್ಕಳಿಂದ ಮನೆ ಕೆಲಸ ಮಾಡಿಸಿದ್ದಾನೆ. ಅಷ್ಟೇ ಅಲ್ಲ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ನಡೆದಿರೋದು ಬಳ್ಳಾರಿ ಜಿಲ್ಲೆಯ ಯಲ್ಲಾಪುರದಲ್ಲಿ. ಯಲ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಾಸ್ತ್ರಿ ಕೃಷ್ಣಮೂರ್ತಿ ಎನ್ನುವವನೇ ಈ ಕೃತ್ಯ ಏಸಗಿದ್ದು. ನಾಲ್ಕೈದು ವರ್ಷಗಳ ಹಿಂದೆಯಷ್ಟೇ ಶಿಕ್ಷಕನಾಗಿ ನೇಮಕಗೊಂಡಿದ್ದ. ಈತನ ಕಿತಾಪತಿ ಒಂದೆರಡಲ್ಲ ಬಿಡಿ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಮನೆ ಪಾಟದ ನೆಪ ಮಾಡಿಕೊಂಡು ವಿದ್ಯಾರ್ಥಿನಿಯರನ್ನು ಮೆನೆಗೆ ಕರೆಸಿಕೊಳ್ಳುತ್ತಿದ್ದನಂತೆ. ವಿದ್ಯಾರ್ಥಿಗಳ ಬಳಿ […]

Bengaluru Just In Karnataka State

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭರ್ಜರಿ ಮಳೆಯ ಸಾಧ್ಯತೆ!

ರಾಜ್ಯದ ಹಲವ ಜಿಲ್ಲೆಗಳಲ್ಲಿ ಜೂನ್ 20ರ ವರೆಗೆ ಭರ್ಜರಿ ಮಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬಿಪೋರ್ಜಾಯ್ […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 19ರ ವರೆಗೆ ಮಳೆರಾಯನ ಸಿಂಚನ!

ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರೈತರು ಸಂತಸ ಪಡುವ ಸಂಗತಿಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜೂನ್ 19ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ […]

Just In National

NEET UG ಫಲಿತಾಂಶ 2023 ಬಿಡುಗಡೆ; ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟ

NTA ಯು NEET UG ಪರೀಕ್ಷೆ 2023 ರ ಫಲಿತಾಂಶ ಬಿಡುಡೆಯಾಗಿದ್ದು, ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು. neet.nta.nic.in, ntaresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ತಮಿಳುನಾಡಿನ ಪ್ರಬಂಜನ್ ಜೆ ಮತ್ತು ಆಂಧ್ರಪ್ರದೇಶದ ಬೋರಾ ವರುಣ್ ಚಕ್ರವರ್ತಿ ಅವರು ನೀಟ್ ಪರೀಕ್ಷೆಯಲ್ಲಿ ಶೇ. 99.99 ಅಂಕಗಳೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ ಎನ್ನಲಾಗಿದೆ. ಪರೀಕ್ಷೆಯಲ್ಲಿ ಒಟ್ಟು 20.38 ಲಕ್ಷ ಅಭ್ಯರ್ಥಿಗಳ ಪೈಕಿ 11.45 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಗರಿಷ್ಠ 1.39 ಲಕ್ಷ, […]

Crime Just In Karnataka State

ಕುಡಿದ ಮತ್ತಿನಲ್ಲಿ 2 ವರ್ಷದ ಮಗುವನ್ನ ಕೊಂದ ಪಾಪಿ ತಂದೆ!

ಕೋಲಾರ: ಈ ಪಾಪಿ ತಂದೆ ಮಾಡಿರೋದನ್ನ ಕೇಳಿದ್ರೆ ಯಾರಿಗಾದ್ರು ಕರಳು ಚುರುಕ್ ಅನ್ನುತ್ತೆ. ಕುಡಿದ ಮತ್ತಿನಲ್ಲಿ ತನ್ನ ಎರಡು ವರ್ಷದ ಮಗುವನ್ನೇ ಕೊಂದಿದ್ದಾನೆ. ಅಸಲಿಗೆ ಈ ಘಟನೆ ನಡೆದಿರೋದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೆ.ಬಿ ಕೊತ್ತೂರು ಗ್ರಾಮದಲ್ಲಿ. ಇಂತ ಹೇಯ್ಯ ಕೃತ್ಯ ಮಾಡಿದವನ ಹೆಸರು ಗಂಗಾಧರ. ಕೂಲಿ ಕೆಲಸ ಮಾಡಿಕೊಂಡಿದ್ದ ಗಂಗಾಧರ 9 ವರ್ಷಗಳ ಹಿಂದೆ ರೇಣುಕಾ ಎನ್ನುವವಳನ್ನ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿಗೆ ಮೂರು ಜನ ಮಕ್ಕಳು ಇದ್ದಾರೆ. ಆದ್ರೆ ಗಂಗಾಧರ ಸದಾ ಕುಡಿದು […]

Bengaluru Just In Karnataka Politics State Uncategorized

ನಾಳೆಯಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ; ಕಂಡಕ್ಟರ್ ಆಗಿ ಟಿಕೆಟ್ ನೀಡಲಿದ್ದಾರೆ ಸಿಎಂ!

ಬೆಂಗಳೂರು: ಸರ್ಕಾರದ ಮಹತ್ವಾ ಕಾಂಕ್ಷೆ ಯೋಜನೆ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಳೆ ಬೆಳಿಗ್ಗೆ 11ಕ್ಕೆ ಬಸ್ ಕಂಡಕ್ಟರ್ ಆಗಿ ಚಾಲನೆ ನೀಡಲಿದ್ದಾರೆ. ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ವಹಿಸಲಿದ್ದಾರೆ. ಡಿ.ವಿ.ಸದಾನಂದಗೌಡ (DV Sadananda Gowda), ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ (BJP) ಸಂಸದರಿಗೂ ಆಹ್ವಾನ ನೀಡಲಾಗಿದೆ. ಈ ಯೋಜನೆಯನ್ನು ಹಬ್ಬದಂತೆ ಆಚರಿಸಿ, ಚಾಲನೆ ನೀಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಬಸ್‍ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ […]

Bengaluru Just In Karnataka National State

ದೇಶದಲ್ಲಿ ಹೆಚ್ಚಾದ ಬಿಪೋರ್ ಜಾಯ್ ಸೈಕ್ಲೋನ್ ಭೀತಿ; ತೀವ್ರ ಸ್ವರೂಪಕ್ಕೆ ತಿರುಗುವ ಸಾಧ್ಯತೆ!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದ ಪರಿಣಾಮ ನೈರುತ್ಯ ಮುಂಗಾರು ಮಾರುತಗಳು ಈ ಬಾರಿ ತಡವಾಗಿವೆ. ಈ ವಾಯುಭಾರ ಕುಸಿತವು ಚಂಡಮಾರುತದ ಸ್ವರೂಪಕ್ಕೆ ತಿರುಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಇದೇ ರೀತಿಯ ವಾಯುಭಾರ ಕುಸಿತ ಮುಂದುವರೆದರೆ ಅದು ಚಂಡಮಾರುತದ ರೂಪ ಪಡೆಯಲಿದ್ದು, ಈಗಾಗಲೇ ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂದು ಹೆಸರಿಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಈ ಚಂಡಮಾರುತವು ಉತ್ತರ ದಿಕ್ಕಿಗೆ ಚಲಿಸುವ ಸೂಚನೆ ನೀಡಿದೆ. ಈ ಮೂಲಕ ಭಾರತದ ಪಶ್ಚಿಮ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳೂ ಇವೆ. ಗೋವಾ ಹಾಗೂ […]

Bengaluru Just In Karnataka State

ರಾಜ್ಯದಲ್ಲಿ ನೀರಿನ ಬಿಲ್ ಏರಿಕೆ; ಸದ್ಯದಲ್ಲಿಯೇ ಗ್ರಾಹಕರಿಗೆ ಮತ್ತೊಂದು ಶಾಕ್!

ಸಿಲಿಕಾನ್ ಸಿಟಿಯಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿನ್ನೆ ಸಂಜೆ ಕಾವೇರಿ ಭವನಕ್ಕೆ ಭೇಟಿ ನೀಡಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೈಗೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಲಮಂಡಳಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಕುರಿತು ಅಧಿಕಾರಿಗಳು ಡಿಸಿಎಂಗೆ ಮಾಹಿತಿ ನೀಡಿದರು. 2014ರಿಂದಲೂ ನೀರಿನ ದರ ಪರಿಷ್ಕರಣೆ ಮಾಡಲಾಗಿಲ್ಲ. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ ಎಂದು ಹೇಳಿದ್ದಾರೆ […]