ವಿದ್ಯುತ್ ಬಿಲ್ ಕಟ್ಟದಿದ್ದರೆ, ಕನೆಕ್ಷನ್ ಕಟ್; ಗ್ಯಾರಂಟಿ ಅಂತ ಹೇಳುವಂತಿಲ್ಲ!
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿತ್ತು. ಅದರಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು. ಆದರೆ, ಈ ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ. ಅಷ್ಟರಲ್ಲಿಯೇ ವಿದ್ಯುತ್ ಬಿಲ್ ಪಾವತಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನರ ಮನವೊಲಿಸರು ಬೆಸ್ಕಾಂ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ. ಯೋಜನೆ ಅನುಷ್ಠಾನವಾಗುವವರೆಗೆ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ, ಇಲ್ಲದಿದ್ದರೆ ನಿಯಮದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ. […]