Kornersite

Bengaluru Just In Karnataka Politics State

ಕಾಂಗ್ರೆಸ್ ನವರಿಗೆ ಎಚ್ಚರಿಕೆ ಕೊಟ್ಟ ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ನೂತನ ರಾಜ್ಯಾಧ್ಯಕ್ಷರಾದ ಮೊದಲನೇ ದಿನ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ ವಿಜಯೇಂದ್ರ(BY Vijayendra). ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ(Amit shah) ಹಾಗೂ ಜೆ.ಪಿ ನಡ್ಡಾ(J.P Nadda) ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ […]

Bengaluru Just In Karnataka National State

cyclone: ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಸೈಕ್ಲೋನ್; ಮಳೆಗಾಗಿ ಕಾಯುತ್ತಿರುವ ರೈತರು!

ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ತಾತ್ಕಾಲಿಕವಾಗಿ ದಿನ ನಿಗದಿ ನೀಡಲು ಸಾಧ್ಯವಾಗದಿದ್ದರೂ ಗುಜರಾತ್ ನ ಪೋರಬಂದರ್ ನ ದಕ್ಷಿಣಕ್ಕೆ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುವ್ಯಕ್ಕೆ ಚಲಿಸುವ ಹಾಗೂ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಕೇರಳ ಕರಾವಳಿಯತ್ತ ಮಾನ್ಸೂನ್ ಮುನ್ನಡೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ದಟ್ಟವಾಗಿದೆ ಎಂದು ಐಎಡಿ ತಿಳಿಸಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ […]

Bengaluru Just In Karnataka Politics State

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲ ಬಾರಿಗೆ ರಸ್ತೆಗೆ ಇಳಿದ ಬಿಜೆಪಿ!

ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವು ಭರವಸೆಯೊಂದಿಗೆ ಭರ್ಜರಿ ಗೆಲುವು ಸಾಧಿಸಿ, ಈಗ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಮೊದಲ ಬಾರಿಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದೆ. ಇಂದು ಹಾಗೂ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯುತ್ ನ ಕನಿಷ್ಠ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ […]

Bengaluru Just In Karnataka Politics State

Siddu Cabinet: ನೂತನ ಸಚಿವರಿಗೆ ಖಾತೆ ಹಂಚಿಕೆ ಕಾರ್ಯ ಅಂತಿಮ; ಯಾರಿಗೆ ಯಾವ ಖಾತೆ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಸಚಿವರಿಗೆ ಖಾತೆಗಳು ಕೊನೆಗೂ ಅಧಿಕೃತವಾಗಿವೆ (Cabinet). ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅಂಕಿತ ಹಾಕಿದ ಕೂಡಲೇ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ (Ramalingareddy) ಗೆ ಸಾರಿಗೆ ಖಾತೆಯೊಂದಿಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆ ನೀಡಲಾಗಿದೆ. ಸಮಾಜ ಕಲ್ಯಾಣ ಅಥವಾ ಕಂದಾಯ ಕುರಿತು ಒಲವು ಹೊಂದಿದ್ದರೆನ್ನಲಾದ ಕೆ.ಹೆಚ್ ಮುನಿಯಪ್ಪಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ […]

Bengaluru Just In Karnataka Politics State

ಯಾವ ಸಚಿವರಿಗೆ ಯಾವ ಖಾತೆ!? ಇಲ್ಲಿದೆ ಮಾಹಿತಿ!

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ ಯಾವ ಖಾತೆ? ಯಾರಿಗೆ ಯಾವ ಜಿಲ್ಲಾ ಉಸ್ತುವಾರಿ? ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಯಾರಿಗೆ ಯಾವ ಖಾತೆ (Karnataka cabinet portfolio allocation)ಎನ್ನವ ಪಟ್ಟಿಯೊಂದು ವೈರಲ್ ಆಗಿದೆ. ಡಿಕೆ ಶಿವಕುಮಾರ್ (DK Shivakumar) ಅವರು ನಿರೀಕ್ಷಿಸಿದಂತೆ ಪ್ರಬಲ ಖಾತೆಗಳನ್ನೇ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜಲಸಂಪನ್ಮೂಲ ಹಾಗೂ ಬೆಂಗಳೂರು […]

Bengaluru Just In Karnataka Politics State

ಯಾವ ಜಿಲ್ಲೆಗಳಿಗೆ ಸಿಕ್ತು ಮಂತ್ರಿ ಭಾಗ್ಯ? ಯಾವ ಜಿಲ್ಲೆಗಳಲ್ಲಿ ಆಕ್ರೋಶ?

Bangalore : ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ(Congress Government) ಸಂಪುಟ ವಿಸ್ತರಣೆಯಾಗಿದೆ (Karnataka Cabinet expansion). ಎರಡನೇ ಹಂತದಲ್ಲಿ 24 ಶಾಸಕರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಒಟ್ಟು 34 ಜನರ ಸಂಪುಟ ರಚನೆಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಬಿಡುಗಡೆ ಮಾಡಿದೆ. ಹಳಬರು ಹಾಗೂ ಹೊಸಬರ ತಂಡ ಸಿದ್ಧವಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಹಲವು ಜಿಲ್ಲೆಗಳಿಗೆ ಮಂತ್ರಿ ಭಾಗ್ಯ […]

Bengaluru Just In Karnataka Politics State

Siddaramaiah Cabinet: ಸಂಪುಟವೇನು ಭರ್ತಿಯಾಯಿತು; ಎಲ್ಲರೂ ಸಿಎಂಗೆ ವಿಧೇಯರಾಗಿರುತ್ತಾರೆಯೇ?

Bangalore : ಸಿಎಂ ಸಿದ್ದರಾಮಯ್ಯ ಸಂಪುಟ (Siddaramaiah Cabinet) ಸಂಪೂರ್ಣ ಭರ್ತಿಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಕೆಲವು ಹಿರಿಯರಿಗೆ ಕೊಕ್‌ ನೀಡಲಾಗಿದೆ. ಎರಡನೇ ಹಂತತದಲ್ಲಿ ಹಳಬರು ಹಾಗೂ ಹೊಸಬರನ್ನು ಒಳಗೊಂಡ 24 ಸಚಿವರು ಇಂದು(ಮೇ 27) ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಟ್ಟು 34 ಜನರ ಸರ್ಕಾರ ಅನುಭವಿ- ಉತ್ಸಾಹಿಗಳಿಂದ ಸಿದ್ದರಾಮಯ್ಯ ಸಂಪುಟ ಕೂಡಿದೆ. ಒಟ್ಟು 8 ಜನರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಡಿಸಿಎಂ ಡಿ.ಕೆ. […]

Bengaluru Just In Karnataka Politics State

ಸಿದ್ದು ಸಂಪುಟದಲ್ಲಿ ಯಾರಿಗೆಲ್ಲ ಸಿಗಲಿದೆ ಅವಕಾಶ?

ನವದೆಹಲಿ: ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ಬಹುತೇಕ ಮುಕ್ತಾಯದ ಹಂತಕ್ಕೆ ಬಂದು ನಿಂತಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಕೊನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ಮುದ್ರೆ ಒತ್ತಲಿದ್ದಾರೆ.ಎಚ್,ಕೆ. ಪಾಟೀಲ್, ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ವಿನಯ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಲಕ್ಷ್ಮಣ […]

Bengaluru Just In Karnataka State

ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಡಿಜಿ-ಐಜಿಪಿಯಾಗಿ ಅಲೋಕ್ ಮೋಹನ್ ನೇಮಕ

Bangalore: ಐಪಿಎಸ್‌ ಅಧಿಕಾರಿ ಅಲೋಕ್‌ ಮೋಹನ್‌ (Alok Mohan) ಅವರಿಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ನೂತನ ಸರ್ಕಾರ ರಚನೆಯಾದ ಬೆನ್ನಲ್ಲಿಯೇ ಈ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ 8 ಜನ ಸಚಿವರು ಕೂಡ […]

Bengaluru Just In Karnataka Politics State

CM Siddaramaiah: ಮನೆಯ ಯಜಮಾನಿಗೆ 2 ಸಾವಿರ ರೂ. ಸಿಗುವುದು ಗ್ಯಾರಂಟಿ!

Bangalore : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದ ಪ್ರತಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ಸಿಕ್ಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ […]