Kornersite

Bengaluru Just In Karnataka Politics State

Karnataka Assembly Election: ಜೆಡಿಎಸ್ ನ ಮೂರನೇ ಪಟ್ಟಿ ಬಿಡುಗಡೆ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಜೆಡಿಎಸ್ ಪಕ್ಷವು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾಯಿಸಿದೆ. • ನಿಪ್ಪಾಣಿ- ರಾಜು ಮಾರುತಿ ಪವಾರ್• ಚಿಕ್ಕೋಡಿ […]

Bengaluru Just In Karnataka Politics State

Karnataka Assembly Election: ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ!

ಮೈಸೂರು : ವರುಣಾ ಕ್ಷೇತ್ರದಿಂದ (Varuna Constituency) ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ. ನಂಜಗೂಡಿನಲ್ಲಿ (Nanjangud) ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ […]

Just In National Politics State

Karnataka Assembly Election: 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

NewDelhi : ರಾಜ್ಯದಲ್ಲ ಮೇ. 10ರಂದು ಚುನಾವಣೆ ನಡೆಯಲಿದ್ದು, ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಆಡಳಿತಾರೂಢ ಬಿಜೆಪಿಯು ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ. ಹೀಗಾಗಿ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯಕ್ಕೆ […]

Just In Karnataka Politics State

Karnataka Assembly Election: 10 ಸಾವಿರ ಮನೆಗಳಿಂದ ಭಿಕ್ಷೆ ಬೇಡಿ, ನಾಮಪತ್ರ ಸಲ್ಲಿಕೆ!

Yadagiri : ಅಭ್ಯರ್ಥಿಯೊಬ್ಬರು ನೀಡಿರುವ ಹಣವನ್ನು ಎಣಿಸಲು ಅಧಿಕಾರಿಗಳೇ ಇಲ್ಲಿ ಸುಸ್ತಾಗಿದ್ದಾರೆ. ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಠೇವಣಿ (Deposite) ಹಣ 10 ಸಾವಿರ ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಎಣಿಸುವಲ್ಲಿ ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ. ಈ ಪಕ್ಷೇತರ ಅಭ್ಯರ್ಥಿ ಹೆಸರು ಯಂಕಪ್ಪ. ಕಳೆದ ಒಂದು ವರ್ಷದಿಂದ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ (Beg) ಬೇಡಿ, ಪ್ರತಿ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಒಂದು […]

Bengaluru Just In Karnataka Politics State

Karnataka Assemby Election: ಬಿಜೆಪಿಯ ಮತ್ತೊಂದು ವಿಕೆಟ್ ಪತನ!

Shivamogga : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಬಿರುಸುಗೊಂಡಿದ್ದು, ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿಯಲ್ಲಿಯಂತೂ ಈ ತಲೆನೋವು ಹೆಚ್ಚಾಗುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಪಕ್ಷದ ಬಾಗಿಲು ಮುಚ್ಚುತ್ತಿದ್ದಾರೆ. ಸದ್ಯ ಈ ಸಾಲಿಗೆ ಶಿವಮೊಗ್ಗದ(Shivamogga) ಆಯನೂರು ಮಂಜುನಾಥ್(Ayanur Manjunath) ಸೇರಿದ್ದಾರೆ. ಅವರು ವಿಧಾನಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, […]

Bengaluru Just In Karnataka Politics State

Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!

Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್‌ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್‌ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ […]

Bengaluru Just In Karnataka State

Karnata Assembly Election: ಮುತಾಲಿಕ್ ಬಳಿ ಇರುವ ಆಸ್ತಿಗಿಂತ, ಕೇಸ್ ಗಳೇ ಹೆಚ್ಚು!

ಉಡುಪಿ : ಪ್ರಮೋದ್ ಮುತಾಲಿಕ್(Pramod Muthalik) ಅವರು, ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಆಸ್ತಿ ವಿವರ ಘೋಷಿಸಿದ್ದಾರೆ. ಮುತಾಲಿಕ್‌ ಅವರ ಬಲಿ ಇರುವ ಹಣ, ಆಸ್ತಿಗಿಂತ ಕೇಸ್ ಗಳೇ ಹೆಚ್ಚಾಗಿವೆ ಅನಿಸುತ್ತಿದೆ. ಪ್ರಮೋದ್ ಮತಾಲಿಕ್ ಬಳಿ ಸ್ಥಿರಾಸ್ತಿ, ವಾಹನ, ಸಾಲ ಇಲ್ಲ. ಮುತಾಲಿಕ್ ಕೈಯಲ್ಲಿ 10,500 ರೂ. ನಗದು, ಎರಡು ಬ್ಯಾಂಕುಗಳಲ್ಲಿ 2,63,500 ರೂ. ಇದೆ ಎಂದು ಘೋಷಿಸಿಕೊಂಡಿದ್ದಾರೆ. ರಾಜ್ಯದ 7 ಠಾಣೆಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ಕೇಸು ದಾಖಲಾಗಿವೆ. ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ […]

Bengaluru Just In Karnataka Politics State

Karnataka Assembly Election: ಶೆಟ್ಟರ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಯಡಿಯೂರಪ್ಪ!

Bangalore : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು (Jagadish Shettar) ಬಿಎಲ್ ಸಂತೋಷ್ (BL Santosh) ವಿರುದ್ಧ ಮಾತನಾಡಿರುವುದು ತಪ್ಪು. ಅವರಿಗೆ ಇದು ಶೋಭೆ ತರುವುದಿಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಯಡಿಯೂರಪ್ಪ (BS Yediyurappa) ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಎಲ್ಲ ರೀತಿಯಲ್ಲಿ ಮನವೊಲಿಸುವ ಕಾರ್ಯ ಮಾಡಲಾಗಿತ್ತು. ಆದರೆ ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದಾಗಿ ನಮಗೆ ಯಾವುದೇ ತೊಂದರೆಯಾಗುವುದಿಲ್ಲ. ಶೆಟ್ಟರ್ […]

Just In Karnataka

Karnataka Assembly Election: ವರುಣಾ ಕ್ಷೇತ್ರದ ಅಖಾಡದಲ್ಲಿ ಸೋಮಣ್ಣಗೆ ಕ್ಲಾಸ್ ತಗೊಂಡ ಮತದಾರರು!

Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ. ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? […]

Just In Karnataka State

Karnataka Assembly Election: ನನ್ನ ಕಾರು ಸುಡಲು ಯತ್ನಿಸಿದ್ದರು; ಎಚ್.ಕೆ. ಪಾಟೀಲ್ ವಿರುದ್ಧ ಗಂಭೀರ ಆರೋಪ!

Gadag: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲು ಎಸಿ ಕಚೇರಿಗೆ ತೆರಳಿದ್ದ ಸಂದರ್ಭದಲ್ಲಿ ಅನಿಲ್ ಮೆಣಸಿನಕಾಯಿ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.ಈ ವಿಷಯವಾಗಿ ಪ್ರತಿಕ್ರಿಯಿಸಿರುವ ಮೆಣಸಿನಕಾಯಿ, ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಎಚ್.ಕೆ ಪಾಟೀಲ್(H. K. Patil) ಕೂಡ ಒಳಗೆ ನನಗೆ ಶುಭ ಹಾರೈಸಿದ್ದರು. ನಾಮಪತ್ರ ಸಲ್ಲಿಸಿ ವಾಪಸ್ ಬರುವಾಗ ಕಾಂಗ್ರೆಸ್ ಮೆರವಣಿಗೆ ಬಂತು. ನನ್ನ ಕಾರಿನ ಮುಂದೆ ಘೋಷಣೆ ಕೂಗಿದರು. ನಾನು ಗ್ಲಾಸ್ ಇಳಿಸಿ ಯಾಕೆ ಎಂದು […]