KH Muniyappa: ರಾಜ್ಯದ ಹಿರಿಯ ರಾಜಕಾರಣಿಗೆ ಒಲಿದ ಸಚಿವ ಪಟ್ಟ
ರಾಜ್ಯ ರಾಜಕೀಯದ ಅತ್ಯಂತ ಹಿರಿಯ ರಾಜಕಾರಣ ಕೆ.ಹೆಚ್.ಮುನಿಯಪ್ಪ ಅವರು, 1960ರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಮುನ್ನುಡಿ ಬರೆದಿದ್ದರು. ಸದ್ಯ ಅವರು ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ. ಇಂದು ನಡೆದ ಸಮಾರಂಭದಲ್ಲಿ ಕೆ.ಹೆಚ್. ಮುನಿಯಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಮಾರ್ಚ್ 07, 1948ರಲ್ಲಿ ಜನಿಸಿದ್ದ ಅವರಿಗೆ ಸದ್ಯ 75 ವರ್ಷ ವಯಸ್ಸು. ವಕೀಲರಾಗಿ ಕಾರ್ಯನಿರ್ವಹಿಸಿದ್ದು, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೆ.ಹೆಚ್ ಮುನಿಯಪ್ಪ ಮೊದಲಿಗೆ 1978-83 […]
