Kornersite

Crime Just In Karnataka State Uncategorized

ಸೂಟ್ ಕೇಸ್ ನಲ್ಲಿ ಪತ್ತೆಯಾದ ಮಹಿಳೆಯ ಮೃತ ದೇಹ!

ಕೊಡಗಿನ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರ ಕಾಡು ಪ್ರದೇಶದಲ್ಲಿ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ

Entertainment Extra Care Gossip Mix Masala Relationship Sandalwood

ಸಪ್ತಪದಿ ತುಳಿಯಲಿದ್ದಾರೆ ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್

ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು ಸಪ್ತಪದಿ ತುಳಿಯಲಿದ್ದಾರೆ. ಆಗಸ್ಟ್ 24 ರಂದು ಈ ಜೋಡಿ ಕೊಡವ ಸಂಪ್ರದಾಯದ ಪ್ರಕಾರ ವಿರಾಜಪೇಟೆಯಲ್ಲಿ ಮದುವೆಯಾಗಲಿದ್ದಾರೆ. ಈಗಾಗಲೇ ಇವರಿಬ್ಬರ ವಿವಾಹದ ಆಮಂತ್ರಣ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದೆ. ಕೊಡವ ಭಾಷೆಯಲ್ಲೇ ಲಗ್ನ ಪತ್ರಿಕೆಯನ್ನು ಮುದ್ರಿಸಲಾಗಿದೆ. ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್ ಹಲವು ವರ್ಷಗಳಿಂದ ಪರಿಚಿತರಾಗಿದ್ದರು. ಕೋವಿಡ್ ವೇಳೆಯಲ್ಲಿ ಹಾಗೂ ಹಲವು ಸಮಾಜಮುಖಿ ಕೆಲಸಗಳಲ್ಲಿ ಈ ಜೋಡಿ ತಮ್ಮನ್ನ ತೊಡಗಿಸಿಕೊಂಡಿತ್ತು. ಇದೀಗ ತಮ್ಮ ಜೀವನದ […]

Bengaluru Just In Karnataka State

Rani Update: ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ; ನಿಮ್ಮ ಜಿಲ್ಲೆ ಇದೆಯಾ ನೋಡಿ?

ಬೆಂಗಳೂರು: ರಾಜ್ಯದಲ್ಲಿ ಜೂನ್ 2ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೆ ವ್ಯಾಪಕ ಮಳೆಯಾಗುವ ಸಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ […]

Crime Just In Karnataka State

Breaking News: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷನ ಮೇಲೆ ಫೈರಿಂಗ್!

Madikeri : ಕೊಡಗು (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ, ನ್ಯಾಯವಾದಿ ಪಿ.ಕೃಷ್ಣಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಲು ಯತ್ನಿಸಿರುವ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ. ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ ಎನ್ನಲಾಗಿದೆ. ಈ ಕುರಿತು ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. […]