ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಬಲಿ!
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru Mysuru Expressway) ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಗಜ್ಜಲೆಗೆರೆ ಹತ್ತಿರವೇ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಟಾಟಾ ಹೆಕ್ಸಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಓರ್ವ ವ್ಯಕ್ತಿಯನ್ನು ನೀರಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಅವರು ಉತ್ತರ ಪ್ರದೇಶದ ತರಬೇತಿ […]