Rain Update: ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 1ರ ವರೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಕರಾವಳಿ ಪ್ರದೇಶದ ಇನ್ನೂ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಇದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]