ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆ!
ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತರು ಸಂಜೆಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಕೆಆರ್ ಎಸ್ ಆಣೆಕಟ್ಟೆ ಸಮೀಪ, ಬೃಂದಾವನ ಪ್ರವೇಶ ದ್ವಾರದ ಬಳಿ ಧರಣಿ ನಡೆಯುತ್ತಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರ. ತಮಿಳುನಾಡಿಗೆ ನೀರು ಹರಿಸುವಂತೆ ನಿರ್ದೇಶನ ನೀಡುವುದು ಒಪ್ಪುವ ವಿಷಯವಲ್ಲ. ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವವರೆಗೆ ಧರಣಿ ನಡೆಯಲಿದೆ ಎಂದು […]








