Police: ಪೀಪಲ್ಸ್ ಮ್ಯಾನ್ ಎಂಬ ಹೆಸರು ಗಳಿಸಿದ್ದ ಇನ್ಸ್‌ಪೆಕ್ಟರ್ ಇನ್ನಿಲ್ಲ!
ಬೆಂಗಳೂರು: ಸಿಲಿಕಾನ್ ಸಿಟಿಯ ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಂಜುನಾಥ್ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಪತ್ನಿ ಹಾಗೂ ಓರ್ವ ಪುತ್ರನನ್ನು ಅವರು ಅಗಲಿದ್ದಾರೆ. ಲಿವರ್ ಕ್ಯಾನ್ಸರ್ ಕೊನೆ ಹಂತದಲ್ಲಿದ್ದಾಗ ಅದು ಮಂಜುನಾಥ್ ಗಮನಕ್ಕೆ ಬಂದಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ಕೊಂಡೊಯ್ಯಲಾಗಿದ್ದು, ಅವರ ಹುಟ್ಟೂರಾದ ಹುಟ್ಟೂರಾದ ಹಾಸನ ಜಿಲ್ಲೆಯ ಉದ್ದೂರಿನಲ್ಲಿ ಇಂದು […]